Karnataka High Court Recruitment 2020: 30 ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಲಯ 30 ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 21,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ಹೈ ಕೋರ್ಟ್ ನೇಮಕಾತಿ..ಅ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಅಕ್ಟೋಬರ್ 21,2020ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾತಿ/ಪ.ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,550/- ರಿಂದ 63,070/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಗೆ ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ, ಪ್ರಿಲಿಮಿನರಿ ಪರೀಕ್ಷೆಗೆ ಸಾಮಾನ್ಯ ಅಭ್ಯರ್ಥಿಗಳು 500/-ರೂ, ಪ್ರಮುಖ ಪರೀಕ್ಷೆಗೆ ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 750/-ರೂ ಮತ್ತು ಪ್ರಮುಖ ಪರೀಕ್ಷೆಗೆ ಇತರೆ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಅಕ್ಟೋಬರ್ 28,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/Index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2020 notification has been released for 30 district judge posts. Interested candidates can apply through online before October 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X