ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ 150 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 26,2021 ರಿಂದ ಪ್ರಾರಂಭವಾಗಿ ನವೆಂಬರ್ 27,2021ರಂದು ಕೊನೆಗೊಳ್ಳಲಿದೆ.
Karnataka High Court ನೇಮಕಾತಿ 2021 ಅರ್ಹತೆ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಲೆ/ವಾಣಿಜ್ಯ/ಕಂಪ್ಯೂಟರ್ ಅಪ್ಲಿಕೇಶನ್/ವಿಜ್ಞಾನ/ವ್ಯವಹಾರ ನಿರ್ವಹಣೆ ವಿದ್ಯಾರ್ಹತೆಯನ್ನು ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಶೇ.55ರಷ್ಟು ಅಂಕಗಳೊಂದಿಗೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಶೆ.50ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಮತ್ತು ಹಿರಿಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.
Karnataka High Court ನೇಮಕಾತಿ 2021 ವಯೋಮಿತಿ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 27,2021ರ ಅನ್ವಯ ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಪ್ರವರ್ಗ-2ಎ/2ಬಿ ಅಥವಾ 3ಎ/3ಬಿ ಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
Karnataka High Court ನೇಮಕಾತಿ 2021 ವೇತನ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
Karnataka High Court ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಬೆರಳಚ್ಚು ಪರೀಕ್ಷೆ ಮತ್ತು ವೈವಾ ವೋಸ್ ಮೂಲಕ ಆಯ್ಕೆ ಮಾಡಲಾಗುವುದು.
Karnataka High Court ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳು 350/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ನವೆಂಬರ್ 30,2021ರೊಳಗೆ ಪಾವತಿಸಬೇಕಿರುತ್ತದೆ.
Karnataka High Court ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 27,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.