ಕರ್ನಾಟಕ ಉಚ್ಚ ನ್ಯಾಯಾಲಯ 19 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್‌ಲೈನ್ ಮೂಲಕ ಮೇ 29ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.
ವಯೋಮಿತಿ:
ಮೇ 29,201ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











