Karnataka High Court Recruitment 2021 : 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 9,2021ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ಉಚ್ಚನ್ಯಾಯಾಲಯ ನೇಮಕಾತಿ..ಡಿ.9ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪ.ಜಾತಿ/ಪ.ಪಂಗಡದ ಗರಿಷ್ಟ 48 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,550/- ರಿಂದ 63,070/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಗೆ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಪ್ರಮುಖ ಪರೀಕ್ಷೆಗೆ ತರೆ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಡಿಸೆಂಬರ್ 14,2021ರ ರಾತ್ರಿ 11:59ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/Index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಡಿಸೆಂಬರ್ 9,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2021 notification has been released for 21 district judge posts. Interested candidates can apply through online before December 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+