Karnataka HC Recruitment 2021 : 3 ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 3 ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ವಿದ್ಯಾರ್ಹತೆ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಂಗ್ಲಭಾಷೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಟ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು.

ವಯೋಮಿತಿ:

ವಯೋಮಿತಿ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೇತನ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಓಬಿಸಿ/ಓಸಿ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಅಕ್ಟೋಬರ್ 21,2021ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಅನುವಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2021 notification has been released for 3 translator posts. Interested candidates can apply before October 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+