Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ 129 ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 17,2022 ರಿಂದ ಸೆಪ್ಟೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 129 ಗ್ರೂಪ್ ಡಿ ಹುದ್ದೆಗಳ ನೇಮಕಾತಿ

Karnataka High Court ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

Karnataka High Court ನೇಮಕಾತಿ 2022 ವಯೋಮಿತಿ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ ಅಥವಾ 3ಬಿ ಗೆ ಸೇರಿದ ಅಭ್ಯರ್ಥಿಗಳ ವಯಸ್ಸು ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಪಕ್ಷದಲ್ಲಿ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.

Karnataka High Court ನೇಮಕಾತಿ 2022 ವೇತನ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Karnataka High Court ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka High Court ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಗ್ರೂಪ್ ಡಿ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಯು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಸೆಪ್ಟೆಂಬರ್ 21,2022ರೊಳಗೆ ಪಾವತಿಸಬೇಕಿರುತ್ತದೆ.

Karnataka High Court ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ [ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)] ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/civilJudges2022.php ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 17,2022 ರಿಂದ ಸೆಪ್ಟೆಂಬರ್ 17,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2022 notification has been released for 129 group D posts. Interested candidates can apply before September 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+