Karnataka High Court Recruitment 2022 : 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 7,2022 ರಿಂದ ಏಪ್ರಿಲ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Karnataka High Court ನೇಮಕಾತಿ 2022 ವಿದ್ಯಾರ್ಹತೆ :

Karnataka High Court ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಪ್ರೌಢದರ್ಜೆಯಲ್ಲಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka High Court ನೇಮಕಾತಿ 2022 ವಯೋಮಿತಿ :

Karnataka High Court ನೇಮಕಾತಿ 2022 ವಯೋಮಿತಿ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 7,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Karnataka High Court ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
 

Karnataka High Court ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka High Court ನೇಮಕಾತಿ 2022 ವೇತನ :

Karnataka High Court ನೇಮಕಾತಿ 2022 ವೇತನ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 1,42,400/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Karnataka High Court ನೇಮಕಾತಿ 2022 ಅರ್ಜಿ ಶುಲ್ಕ :

Karnataka High Court ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ)ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ, ಪ್ರವರ್ಗ 2ಎ, 2ಬಿ, 3ಎ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಏಪ್ರಿಲ್ 12,2022ರೊಳಗೆ ಪಾವತಿಸಬೇಕಿರುತ್ತದೆ.

Karnataka High Court ನೇಮಕಾತಿ 2022 ಅರ್ಜಿ ಸಲ್ಲಿಕೆ :

Karnataka High Court ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನೇಮಕಾತಿಯ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 7,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka high court recruitment 2022 notification has been released for 54 assistant court secretary posts. Interested candidates can apply before April 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X