ಕರ್ನಾಟಕ ಉಚ್ಚ ನ್ಯಾಯಾಲಯ 56 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 23,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Karnataka High Court ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.

Karnataka High Court ನೇಮಕಾತಿ 2022 ವಯೋಮಿತಿ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು. ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

Karnataka High Court ನೇಮಕಾತಿ 2022 ವೇತನ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,770/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Karnataka High Court ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka High Court ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮೇ 26,2022ರ ರಾತ್ರಿ 11:59ರೊಳಗೆ ಅಥವಾ ಚಲನ್ ಮೂಲಕ ಮೇ 26,2022ರೊಳಗೆ ಪಾವತಿಸಬೇಕಿರುತ್ತದೆ.

Karnataka High Court ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/civilJudges2022.php ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 23,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.