ಕರ್ನಾಟಕ ಹೈಕೋರ್ಟ್: 101 ಹುದ್ದೆಗಳ ನೇರ ನೇಮಕಾತಿ

Posted By:

ಕರ್ನಾಟಕ ಉಚ್ಚ ನ್ಯಾಯಾಲಯವು ಪ್ರಸ್ತುತ ಇರುವ ಹಾಗೂ ಅನುಷಂಗಿಕ ಖಾಲಿ ಹುದ್ದೆಗಳೂ ಸೇರಿದಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಯ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಭಾರತೀಯ ರೈಲ್ವೆ: 26502 ಹುದ್ದೆಗಳ ನೇಮಕಾತಿ

ಒಟ್ಟು 101 ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: 407 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಸಿವಿಲ್ ನ್ಯಾಯಾಧೀಶರ ಹುದ್ದೆಯ ನೇಮಕಾತಿ

ಉಚ್ಚ ನ್ಯಾಯಾಲಯದಲ್ಲಿ ಮತ್ತು ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಅಗತ್ಯ ವಿದ್ಯಾರ್ಹತೆಯನ್ನು ಹೊಂದಿರುವ ಎಲ್ಲಾ ಸೇವಾನಿರತ ಅಭ್ಯರ್ಥಿಗಳು, ಅವರ ವೃಂದ ತಾರತಮ್ಯವಿಲ್ಲದೆ ಎಲ್ಲರೂ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ

ಬ್ಯಾಕ್ ಲಾಗ್ ಸೇರಿದಂತೆ ಒಟ್ಟು 101 ಸಿವಿಲ್ ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳುಲಾಗುತ್ತಿದೆ.

ವೇತನ ಶ್ರೇಣಿ: ರೂ.27700-44770/-

ಶೈಕ್ಷಣಿಕ್ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿದ್ದು, ವಕೀಲರಾಗಿ ನೋಂದಣಿ ಹೊಂದಿರಬೇಕು.

ನೇಮಕಾತಿ ವಿಧಾನ

ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದ್ದು, ಪೂರ್ವಭಾವಿ ಪರೀಕ್ಷೆ, ಮೂಖ್ಯ ಲಿಖಿತ ಪರೀಕ್ಷೆ ಮತ್ತ ಮೌಖಿಕ ಪರೀಕ್ಷೆಗಳಾಗಿರುತ್ತವೆ.

ಮುಖ್ಯ ಲಿಖಿತ ಪರೀಕ್ಷೆ

ಮುಖ್ಯ ಲಿಖಿತ ಪರೀಕ್ಷೆಯು ಮೂರು ಪತ್ರಿಕೆಗಳನ್ನೊಳಗೊಂಡಿದ್ದು, ಒಟ್ಟು ಮುನ್ನೂರು ಅಂಕಗಳಿಗೆ ನಡೆಸಲಾಗುವುದು.

ಮೌಖಿಕ ಪರೀಕ್ಷೆ ನೂರು ಅಂಕಗಳಿಗೆ ಮತ್ತು 25 ಅಂಕಗಳಿಗೆ ಕಂಪ್ಯೂಟರ್ ಜ್ಞಾನದ ಪರೀಕ್ಷೆ ಕೂಡ ಇರಲಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-
  • ಎಸ್‌ಸಿ/ಎಸ್‌ಟಿ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.500/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

English summary
High Court of Karnataka invites online applications from the eligible candidates for the post of civil judges.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia