ಕರ್ನಾಟಕ ವಿಧಾಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 43 ವರದಿಗಾರರು, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಬೆರಳಚ್ಚುಗಾರರು ಮತ್ತು ದಲಾಯತ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.
KLA ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ವರದಿಗಾರರು - 2 ಹುದ್ದೆಗಳು
ಕಿರಿಯ ಸಹಾಯಕ - 10 ಹುದ್ದೆಗಳು
ಕಂಪ್ಯೂಟರ್ ಆಪರೇಟರ್ - 4 ಹುದ್ದೆಗಳು
ಬೆರಳಚ್ಚುಗಾರ - 1 ಹುದ್ದೆ
ದಲಾಯತ್ - 26 ಹುದ್ದೆಗಳು
ಒಟ್ಟು 43 ಹುದ್ದೆಗಳು
KLA ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ಕನ್ನಡ ವರದಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಜೊತೆಗೆ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚುಚ ಪರೀಕ್ಷೆಗಳಲ್ಲಿ ಉತ್ತೀರ್ಣ. ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಬ್ಯಾಚಲರ್ಸ್ ಪದವಿ ಅಥವಾ ಬಿ.ಎಸ್ಸಿ, ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಪದವಿ, ಕಿರಿಯ ಸಹಾಯಕರು ಹುದ್ದೆಗಳಿಗೆ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ, ಬೆರಳಚ್ಚುಗಾರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಜೊತೆಗೆ ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣ ಮತ್ತು ದಲಾಯತ್ ಹುದ್ದೆಗಳಿಗೆ 7ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
KLA ನೇಮಕಾತಿ 2022 ವಯೋಮಿತಿ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ವರದಿಗಾರರು, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಬೆರಳಚ್ಚುಗಾರರು ಮತ್ತು ದಲಾಯತ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KLA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ವರದಿಗಾರರು, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಬೆರಳಚ್ಚುಗಾರರು ಮತ್ತು ದಲಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಎರಡೂ ವಿಧಾನಗಳನ್ನು ಅನುಸರಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುವುದು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KLA ನೇಮಕಾತಿ 2022 ವೇತನ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ವರದಿಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ, ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/- ರಿಂದ 58,250/-ರೂ, ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ, ಬೆರಳಚ್ಚುಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,400/- ರಿಂದ 42,000/-ರೂ ಮತ್ತು ದಲಾಯತ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
KLA ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ವರದಿಗಾರರು, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಬೆರಳಚ್ಚುಗಾರರು ಮತ್ತು ದಲಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು.
KLA ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ವಿಧಾಸಭೆ ಸಚಿವಾಲಯ ನೇಮಕಾತಿಯ ವರದಿಗಾರರು, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್, ಬೆರಳಚ್ಚುಗಾರರು ಮತ್ತು ದಲಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kla.kar.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 27,2022ರ ಸಂಜೆ 4 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಕಚೇರಿಗೆ ಅರ್ಜಿಯನ್ನು ತಲುಪಿಸತಕ್ಕದ್ದು. ಅರ್ಜಿಯ ಲಕೋಟೆಯ ಮೇಲೆ ಹುದ್ದೆಯ ಹೆಸರು ಹಾಗೂ ಅರ್ಜಿದಾರರ ಹೆಸರು, ತಂದೆಯ ಹೆಸರು ಮತ್ತು ಸರಿಯಾದ ವಿಳಾಸವನ್ನು ನಮೂದಿಸತಕ್ಕದ್ದು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ,
ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ : 5074,
ಮೊದಲನೆ ಮಹಡಿ,
ವಿಧಾನ ಸೌಧ,
ಬೆಂಗಳೂರು-560 001.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











