ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್‌ಸಿಪಿ/ಟಿಎಸ್ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಪ.ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಟ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಸ್ಟೈಫೆಂಡ್:
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ/ವಾಹಿನಿಗಳಲ್ಲಿ ತರಬೇತಿ ನೀಡಿ ತಿಂಗಳಿಗೆ 15 ಸಾವಿರ ರೂ. ಸ್ಟೈಫೆಂಡ್ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ ಅಂಚೆ ಮೂಲಕ ನವೆಂಬರ್ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











