3041 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಲಿಂಕ್ ಲಭ್ಯ...

ಪೊಲೀಸ್ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಪೊಲೀಸ್ ಇಲಾಖೆಯು 3041 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. 1028 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಮತ್ತು 2013 ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯಾವುದೇ ಪದವಿಯ ವಿದ್ಯಾರ್ಹತೆ ಅಗತ್ಯವಿಲ್ಲ…3041 ಹುದ್ದೆಗಳಿವೆ...ನೀವೂ ಅರ್ಜಿ ಹಾಕಿ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 17,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ :

ಖಾಲಿ ಹುದ್ದೆಗಳ ವಿವರ :

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) - 1013 ( ಪುರುಷ) ಹುದ್ದೆಗಳು,
ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ)- 2013 (ಪುರುಷ ಮತ್ತು ಮಹಿಳಾ)
ಒಟ್ಟು 3026 ಹುದ್ದೆಗಳು

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಟ 25 ವರ್ಷ ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳಿಗೆ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :

ವೇತನದ ವಿವರ :

ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ :

ಅರ್ಜಿ ಶುಲ್ಕದ ವಿವರ :

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :


ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಸೆಪ್ಟೆಂಬರ್ 23,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 17,2019

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://www.ksp.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

1028 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು

2013 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
karnataka police 2019 going to recruit 3041 constable posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+