ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 300 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿ

ಕರ್ನಾಟಕ ಪೊಲೀಸ್ ಇಲಾಖೆಯು 300 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 6,2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 300 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿವೆ...ನೀವೂ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೇವಾ ನಿರತ ಅಭ್ಯರ್ಥಿ:
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ 5 ವರ್ಷಗಳ ಕನಿಷ್ಟ ಸೇವೆಯನ್ನು ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ /ಹೆಡ್ ಕಾನ್ಸ್‌ಟೇಬಲ್/ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೂರ್ಣಗೊಳಿಸಿರಬೇಕು. ಹಾಗೂ ಹಾಲಿ ಪೊಲೀಸ್ ಇಲಾಖೆಯಲ್ಲಿ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರಬೇಕು.

ಖಾಲಿ ಹುದ್ದೆಗಳ ವಿವರ:

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ - 205

ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) - 63
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರಿಗೆ - 32
ಒಟ್ಟು 300 ಹುದ್ದೆಗಳು

ವಯೋಮಿತಿ ಎಷ್ಟಿರಬೇಕು ?:

ನವೆಂಬರ್ 6,2019ರ ಅನ್ವಯ ಕನಿಷ್ಟ 21 ರಿಂದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೇವಾ ನಿರತ ಅಭ್ಯರ್ಥಿ:

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ
ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 35ವರ್ಷ

ವೇತನದ ವಿವರ:

ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 2ಎ,2ಬಿ,3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳು 100/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ನವೆಂಬರ್ 8ರೊಳಗೆ ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಅಕ್ಟೋಬರ್ 16,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 6,2019 ಸಂಜೆ 6:00ಗಂಟೆ
ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ: ನವೆಂಬರ್ 8,2019

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌
https://www.ksp.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
karnataka police department 2019 going to recruit 300 sub inspector (SI) posts. Interested candidates can apply through online before 6th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+