ರಾಜ್ಯ ಪೊಲೀಸ್ ಇಲಾಖೆಯಲ್ಲಿ 12 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ನೇಮಕಾತಿ 12 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 24,2019 ರ ಸಂಜೆ 6 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್)
Organisation ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)
Educational Qualification ಪದವಿ ಅಥವಾ ತತ್ಸಮಾನ ಪದವಿ
Job Location ಕರ್ನಾಟಕ
Salary Scale 37,900/- ರಿಂದ 70,850/-ರೂ
Application Start Date June 7, 2019
Application End Date June 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯು.ಇ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 24,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

<strong>ರಾಜ್ಯ ಪೊಲೀಸ್ ಇಲಾಖೆಯಲ್ಲಿ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ</strong>ರಾಜ್ಯ ಪೊಲೀಸ್ ಇಲಾಖೆಯಲ್ಲಿ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜೂನ್ 27,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್‌ https://www.ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KSP Recruitment 2019-20: Apply Online for 12 Police Sub Inspector (Civil) Vacancies. Karnataka State Police (KSP) invited Online applications from eligible and interested candidates to fill up Police Sub Inspector (Civil) posts through KSP official notification 2019. Job seekers who are looking for a career in Karnataka Government can make use of this opportunity. Apply online for these KSP Special Reserve Police Constable jobs before 24th June 2019. Official website of KSP is www.ksp.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X