ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 2019 : 2637 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಕರ್ನಾಟಕ ಪೋಸ್ಟಲ್ ಸರ್ಕಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಇಲಾಖೆಯು ಒಟ್ಟು 2637 ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ. ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ದಕ್‌ ಸೇವಕ್‌ (ಅಂಚೆ ಸೇವಕ) ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಕರ್ನಾಟಕ ವೃತ್ತದಲ್ಲಿ ಒಟ್ಟು 2,637 ಹುದ್ದೆಗಳ ನೇಮಕ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸೆಪ್ಟೆಂಬರ್ 22,2019 ರೊಳಗೆ ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಉದ್ಯೋಗಾವಕಾಶ :  ಸೆಪ್ಟೆಂಬರ್ 22ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ದಕ್‌ ಸೇವಕ್‌(ಅಂಚೆ ಸೇವಕ)
Organisation ಕರ್ನಾಟಕ ಪೋಸ್ಟಲ್ ಸರ್ಕಲ್
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ -ತಿಂಗಳಿಗೆ 12,000/- ರಿಂದ 14,500/-ರೂ ಮತ್ತು ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ -10,000/- ರಿಂದ 12,000/-ರೂ
Application Start Date August 5, 2019
Application End Date September 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್‌ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಅಂದರೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು ಹಾಗೂ 60 ದಿನಗಳ ಕಂಪ್ಯೂಟರ್‌ ಟ್ರೇನಿಂಗ್‌ ಕೋರ್ಸ್‌ ಸರ್ಟಿಫಿಕೇಟ್‌ ಅನ್ನು ಹೊಂದಿರಬೇಕು. ಅಭ್ಯರ್ಥಿಯು ಒಂದು ವೇಳೆ ಕಂಪ್ಯೂಟರ್‌ ಅನ್ನು ಒಂದು ವಿಷಯವಾಗಿ ಓದಿದ್ದರೆ ಈ ಸರ್ಟಿಫಿಕೇಟ್‌ನ ಅವಶ್ಯಕತೆ ಇರುವುದಿಲ್ಲ. ಇದರೊಂದಿಗೆ ಅಭ್ಯರ್ಥಿಗಳು ದ್ವಿಚಕ್ರ ವಾಹನ ಚಾಲನೆಯನ್ನು ತಿಳಿದಿರಬೇಕಿರುತ್ತದೆ.

ವಯೋಮಿತಿ:

ಕನಿಷ್ಠ 18 ರಿಂದ ಗರಿಷ್ಠ ವಯೋಮಿತಿ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ+ಓಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ + ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನದ ವಿವರ:

ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/- ರಿಂದ 14, 500/-ರೂ ಮತ್ತು ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,000/- ರಿಂದ 12,000/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದು ವೇಳೆ ಅಭ್ಯರ್ಥಿಯು ಹೆಚ್ಚು ಓದಿದ್ದರೂ ಎಸ್‌ಎಸ್‌ಎಲ್‌ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌

http://appost.in/gdsonline/

ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಗಮನಿಸಲೇಬೇಕಾದ ಅಂಶಗಳು:

• ಅಭ್ಯರ್ಥಿಯು ಒಂದು ಬಾರಿ ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ವೃತ್ತಕ್ಕೆ ಅರ್ಜಿ ಸಲ್ಲಿಸುವುದಾದರೂ ಅಭ್ಯರ್ಥಿಗಳು ಇದೇ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ.
• ಒಬ್ಬ ಅಭ್ಯರ್ಥಿಯು ಗರಿಷ್ಠ 20 ವೃತ್ತದಲ್ಲಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿರುತ್ತದೆ.
• ಶುಲ್ಕ ಪಾವತಿಸುವಾಗ ಪ್ರತಿ ಐದು ಆಯ್ಕೆಗಳಿಗೆ 100 ರೂ. ಶುಲ್ಕವನ್ನು (ಶುಲ್ಕ ವಿನಾಯ್ತಿ ಇರುವವರಿಗೆ ಅನ್ವಯವಾಗುವುದಿಲ್ಲ) ನಿಗದಿಪಡಿಸಲಾಗಿದೆ.
• ರಾಜ್ಯದ ಯಾವ ಜಿಲ್ಲೆಯಲ್ಲಿ, ಎಲ್ಲಿ ಎಷ್ಟು ಹುದ್ದೆ ಖಾಲಿ ಇವೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಅದನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Karnataka postal circle recruitment 2019 notification has been released on official website for the recruitment of 2637 GDS posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X