ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಕ್ರೀಡಾ ಕೋಟಾದಡಿಯಲ್ಲಿ 44 ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮುಂಚೆ ಫೆಬ್ರವರಿ 26,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾರ್ಚ್ 16ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 16,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
| CRITERIA | DETAILS |
| Name Of The Posts | ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ |
| Organisation | ಕರ್ನಾಟಕ ಪೋಸ್ಟಲ್ ಸರ್ಕಲ್ |
| Educational Qualification | ಪದವಿ, 10+2 ಅಥವಾ 12ನೇ ತರಗತಿ |
| Job Location | ಕರ್ನಾಟಕ |
| Salary Scale | ಜ್ಯೂನಿಯರ್ ಅಕೌಂಟೆಂಟ್ - ತಿಂಗಳಿಗೆ 25,500/-ರಿಂದ 81,100/-ರೂ, ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್- ತಿಂಗಳಿಗೆ 25,500/-ರಿಂದ 81,100/-ರೂ ಮತ್ತು ಪೋಸ್ಟ್‌ಮ್ಯಾನ್ -ತಿಂಗಳಿಗೆ 21,700/-ರಿಂದ 69,100/-ರೂ |
| Application Start Date | January 17, 2020 |
| Application End Date | March 16, 2020 |
ಹುದ್ದೆಗಳ ವಿವರ:
ಜ್ಯೂನಿಯರ್ ಅಕೌಂಟೆಂಟ್
ಪೋಸ್ಟಲ್ ಅಸಿಸ್ಟೆಂಟ್
ಸಾರ್ಟಿಂಗ್ ಅಸಿಸ್ಟೆಂಟ್
ಪೋಸ್ಟ್‌ಮ್ಯಾನ್
ವಿದ್ಯಾರ್ಹತೆ:
ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗಳಿಗೆ ಪದವಿ,
ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ 10+2 ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ:
ಜ್ಯೂನಿಯರ್ ಅಕೌಂಟೆಂಟ್ - ತಿಂಗಳಿಗೆ 25,500/-ರಿಂದ 81,100/-ರೂ,
ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್- ತಿಂಗಳಿಗೆ 25,500/-ರಿಂದ 81,100/-ರೂ ಮತ್ತು
ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರಿಂದ 69,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕ್ರೀಡಾ ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಯಾವುದೇ ಅಂಚೆ ಕಛೇರಿಯಲ್ಲಿ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜನಾಂಗ, ಪರಿಶಿಷ್ಟ ಜಾತಿ ಮತ್ತು ಮಾಜಿ ಸೈನಿಕ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕ ಪಾವತಿಸಲು ಮಾರ್ಚ್ 12,2020 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಪೋಸ್ಟಲ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.indiapost.gov.in/vas/Pages/IndiaPostHome.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಮಾರ್ಚ್ 16,2020ರೊಳಗೆ ತಲುಪಿಸಬೇಕಿರುತ್ತದೆ. ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಚೇರಿಯ ವಿಳಾಸ:
ದಿ ಅಸಿಸ್ಟೆಂಟ್ ಡೈರೆಕ್ಟರ್ (ಆರ್&ಇ),
ಓ/ಓ ಛೀಫ್ ಪೋಸ್ಟ್ ಮಾಸ್ಟರ್ ಜನರಲ್,
ಕರ್ನಾಟಕ ಸರ್ಕಲ್,
ಬೆಂಗಳೂರು-560001
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











