ಕೆಪಿಸಿಎಲ್: 18 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಡೆಪ್ಯುಟಿ ಜನರಲ್ ಮ್ಯಾನೇಜರ್, ಫ್ಯಾಕ್ಟರಿ ಆಫೀಸರ್, ಅಕೌಂಟ್ಸ್ ಆಫೀಸರ್, ವೆಲ್ಫೇರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು ಹದಿನೆಂಟು ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅವಶ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಡೆಪ್ಯುಟಿ ಜನರಲ್ ಮ್ಯಾನೇಜರ್, ಫ್ಯಾಕ್ಟರಿ ಆಫೀಸರ್, ಅಕೌಂಟ್ಸ್ ಆಫೀಸರ್, ವೆಲ್ಫೇರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು ಹದಿನೆಂಟು ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಸಿಎಲ್ ನೇಮಕಾತಿ

ಹುದ್ದೆಗಳ ವಿವರ

ಡೆಪ್ಯುಟಿ ಜನರಲ್ ಮ್ಯಾನೇಜರ್ (ಸಿಎ & ಸಿಎಸ್)-01 ಹುದ್ದೆ

ವೇತನ ಶ್ರೇಣಿ: ರೂ.32725-57575/-

ಓರಿಯಂಟಲ್ ಇನ್ಸೂರೆನ್ಸ್ ಕಂಪನಿ 300 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಓರಿಯಂಟಲ್ ಇನ್ಸೂರೆನ್ಸ್ ಕಂಪನಿ 300 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ

ಕರ್ನಾಟಕದಲ್ಲಿನ ವಿಶ್ವವಿದ್ಯಾಲಯದಿಂದ ಮೊದಲ ದರ್ಜೆಯಲ್ಲಿ ಪದವಿ, ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ಟರಟೆರಿಸ್ ಆಫ್ ಇಂಡಿಯಾ ಸಂಸ್ಥೆಯಿಂದ ಅಸೋಸಿಯೇಟ್ ಮೆಂಬರ್ಶಿಪ್ ಸರ್ಟಿಫಿಕೇಟ್ ಹೊಂದಿರಬೇಕು. ಐದು ವರ್ಷ ಸೆಕ್ರೆಟರಿಯಲ್ ವಿಭಾಗದಲ್ಲಿ ಸೇವೆ ಸಲ್ಲಿಸಿರುವ ಅನುಭವವಿರಬೇಕು.

ಫ್ಯಾಕ್ಟರಿ ಮೆಡಿಕಲ್ ಆಫೀಸರ್-06 ಹುದ್ದೆ

ವೇತನ ಶ್ರೇಣಿ: ರೂ.20895-49895/-

ವಿದ್ಯಾರ್ಹತೆ

ಕರ್ನಾಟಕದಲ್ಲಿನ ಅಂಗೀಕೃತ ವೈದ್ಯಕೀಯ ಸಂಸ್ಥೆ/ಕಾಲೇಜಿನಲ್ಲಿ ವೈದ್ಯಶಾಸ್ತ್ರ ಚಿಕಿತ್ಸೆಯಲ್ಲಿ ಸ್ನಾತಕ ಪದವಿ, ಕರ್ನಾಟಕ ಸರ್ಕಾರದಿಂದ ಅಂಗೀಕೃತಗೊಂಡಿರುವ ಕೈಗಾರಿಕಾ ವಿಷಯದಲ್ಲಿ ಕನಿಷ್ಠ ಮೂರು ತಿಂಗಳ ತರಬೇತಿ ಹೊಂದಿರಬೇಕು ಮತ್ತು ಖಾಸಗಿ ಅಥವಾ ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆ/ ಆರೋಗ್ಯ ಕೇಂದ್ರಗಳಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಅಕೌಂಟ್ಸ್ ಆಫೀಸರ್-02 ಹುದ್ದೆಗಳು

ವೇತನ ಶ್ರೇಣಿ: ರೂ.20895-49895/-

ವಿದ್ಯಾರ್ಹತೆ

ಪ್ರಥಮ ದರ್ಜೆಯಲ್ಲಿ ಪದವಿಯ ಜೊತೆಗೆ ಮೆಂಬರ್ಶಿಪ್ ಆಫ್ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟ್ಸ್ ಆಫ್ ಇಂಡಿಯಾ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಕೋರ್ಸ್ ತೇರ್ಗಡೆಯಾಗಿರಬೇಕು.

ವೆಲ್ಫೇರ್ ಆಫೀಸರ್-09 ಹುದ್ದೆಗಳು

ವೇತನ ಶ್ರೇಣಿ: ರೂ.19055-43995/-

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಜೊತೆಗೆ ಎಂಎಸ್ ಡಬ್ಲ್ಯೂ ಪದವಿ ಜೊತೆಗೆ ಎರಡು ವರ್ಷದ ಸೇವಾ ಅನುಭವವಿರಬೇಕು.

ವಯೋಮಿತಿ

ಎಲ್ಲಾ ಹುದ್ದೆಗಳಿಗೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ೩೫ ವರ್ಷ ನಿಗದಿಪಡಿಸಲಾಗಿದೆ. (ಒಬಿಸಿ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ 40 ಮತ್ತು ಮಾ.ಸೈ ಅಭ್ಯರ್ಥಿಗೆ 45 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.500/-
  • ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/-

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನ: 23-09-2017
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-09-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
karnataka power corporation limited (kpcl) invites online application from the eligible candidates to fill 18 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X