ಕರ್ನಾಟಕ ರಾಜ್ಯದ ಕಾರಾಗ್ರಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
32 ಜೈಲರ್ ಮತ್ತು 1070 ವಾರ್ಡರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 09 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಜೈಲರ್-32 ಹುದ್ದೆ
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಒಂದು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸೋಶಿಯಾಲೊಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಾರ್ಡರ್-1070 ಹುದ್ದೆ
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ/ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ
ಕನಿಷ್ಠ -20 ವರ್ಷ
ಗರಿಷ್ಠ-26 ವರ್ಷ (ಪ.ಜಾ/ಪ.ಪಂ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ)
ಅರ್ಜಿ ಶುಲ್ಕ
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ ರೂ.250/-
- ಪ.ಜಾ/ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100/-
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2018
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-01-2018
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22262263
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
Karnataka Prisons Department invites online applications for the post of Jailor and Warder. Applicant can fill and submit the application through online from 21/12/2017 to 09/01/2018.
Story first published: Friday, December 22, 2017, 11:26 [IST]


Click it and Unblock the Notifications











