ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ನೇಮಕಾತಿ

Posted By:

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಶೀಘ್ರಲಿಪಿಗಾರರು -15 ಹುದ್ದೆಗಳು (ಉಳಿದ ಮೂಲ ವೃಂದದ ಹುದ್ದೆಗಳು-10 ಮತ್ತು ಸ್ಧಳೀಯ ವೃಂದದ ಹುದ್ದೆಗಳು-05)

ಪ್ರಮುಖ ದಿನಾಂಕಗಳು

• ಅಂಚೆ ಮೂಲಕ ಅರ್ಜಿಗಳನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಗಧಿ ಪಡಿಸಿದ ಕೊನೆಯ ದಿನಾಂಕ: 31.08.2017.
• ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ಕೊನೆಯ ದಿನಾಂಕ: 11.09.2017

ವೇತನ ಶ್ರೇಣಿ: ರೂ. 16000-29600/-
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‍ಸೈಟ್ www.ksat.kar.nic.in ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ನೋಡುವುದು.

ಆಡಳಿತ ನ್ಯಾಯಮಂಡಳಿಯಲ್ಲಿ ನೇಮಕಾತಿ

ಹುದ್ದೆಗಳ ಆಯ್ಕೆಗಾಗಿ ಮಂಡಳಿಯು ನಿಗಧಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿಗಳನ್ನು ಸಲ್ಲಿಸಬೇಕು. ಇತರೆ ಯಾವುದೇ ನಮೂನೆಗಳಲ್ಲಾಗಲೀ ಅಥವಾ ಬೆರಳಚ್ಚು/ಛಾಯ (ಫೋಟೋ) ಪ್ರತಿ ಮಾಡಿರುವ, ಕೈ ಬರಹದಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ನಮೂನೆಯನ್ನು ನೇರವಾಗಿ ಪಡೆಯಲು ಇಚ್ಚೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ ಶುಲ್ಕ ರೂ.25/-ನ್ನು ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-560 009, ಇವರ ಪದನಾಮಕ್ಕೆ ಸಂದಾಯವಾಗುವಂತೆ ಐಪಿಒ/ಡಿಡಿ ಮೂಲಕ ಅಥವಾ ಈ ಕಛೇರಿಯ ಲೆಕ್ಕಪತ್ರ ಶಾಖೆಯಲ್ಲಿ ಹಣವನ್ನು ಪಾವತಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬಹುದು.

ಅಂಚೆ ಮೂಲಕ ಅರ್ಜಿಗಳನ್ನು ಪಡೆಯಲು ಅಪೇಕ್ಷಿಸುವ ಅಭ್ಯರ್ಥಿಗಳು ರೂ.45/-ರ ಮೌಲ್ಯದ ಅಂಚೆ ಚೀಟಿ ಅಂಟಿಸಿರುವ ಸ್ವ ವಿಳಾಸದ 20 x 30 ಸೆ.ಮೀ. ಅಳತೆಯುಳ್ಳ ಲಕೋಟೆಯೊಡನೆ ಅರ್ಜಿ ನಮೂನೆ ಶುಲ್ಕ ರೂ.25/- ನ್ನು 'ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-560 009,' ಇವರ ಪದನಾಮಕ್ಕೆ
ಸಂದಾಯವಾಗುವಂತೆ ಐ.ಪಿ.ಒ/ಡಿ.ಡಿ. ಮೂಲಕ ಪಾವತಿಸಿ ದಿನಾಂಕ: 31-08-2017 ರೊಳಗೆ ಸದರಿ ಸ್ವ ವಿಳಾಸದ ಲಕೋಟೆಯನ್ನು ಮೇಲ್ಕಂಡ ಕಛೇರಿಗೆ ಕಳುಹಿಸಿ ಪಡೆಯಬಹುದಾಗಿದೆ.

ನಿಗದಿತ ಶುಲ್ಕ:- ಶುಲ್ಕ ಪಾವತಿ ಮಾಡುವ ವಿವರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ
ಪ್ರವರ್ಗದ ಅಭ್ಯರ್ಥಿಗಳು ಶುಲ್ಕ ರೂ.150/- ಗಳನ್ನು, ಐಪಿಒ/ಡಿಡಿ
ಮೂಲಕ 'ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ,
ಕೆಂಪೇಗೌಡ ರಸ್ತೆ, ಬೆಂಗಳೂರು-560 009' ಇವರ ಪದನಾಮಕ್ಕೆ ಸಂದಾಯವಾಗುವಂತೆ ಪಡೆದು
ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ

ಶೈಕ್ಷಣಿಕ ವಿದ್ಯಾರ್ಹತೆ:- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಸದರಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿಯ ನಿಗದಿತ ಅಂಕಣದಲ್ಲಿ ಸ್ಪಷ್ಟವಾಗಿ ನಮೂದಿಸಿರಬೇಕು ಹಾಗೂ ಅವುಗಳ ಒಂದೊಂದು ಛಾಯಾ (ಫೋಟೋ) ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

1. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
2. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರಲಿಪಿ ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗ :35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ :38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ-1: 40 ವರ್ಷಗಳು

ಆಯ್ಕೆ ವಿಧಾನ

1. ಅಭ್ಯರ್ಥಿಯು ನಿಗದಿತ ಪರೀಕ್ಷೆಗಳಲ್ಲಿ ಪಡೆದ ಶೇಕಡ ಒಟ್ಟು ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

2. ಸಂಬಂಧಿಸಿದ ಉದ್ಯೋಗ ವಿನಿಮಯ ಕಛೇರಿಯಿಂದಲೂ ಸಹ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ತರಿಸಿಕೊಳ್ಳಲಾಗುವುದು.

3. ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿ, ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ ಪ್ರಾಧಿಕಾರ,
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ,
ಬೆಂಗಳೂರು- 560 009, ಇವರಿಗೆ ಇವರಿಗೆ ಪಾವತಿಯಾಗುವಂತೆ  ಮೀಸಲಾತಿ ಪ್ರಮಾಣ ಪತ್ರ, ಜನ್ಮ ದಿನಾಂಕದ ಬಗೆಗಿನ ದಾಖಲೆ, ವಿದ್ಯಾರ್ಹತೆಯ ಬಗೆಗಿನ ಛಾಯಾ (ಫೋಟೋ) ಪ್ರತಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ: 11-09-2017 ರ ಸಂಜೆ 05-30 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು.

English summary
karnataka state administration tribunal invites application for recruiting stenographers.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia