ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಿದ್ಯಾರ್ಹತೆ:

ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ಪದವಿ ಹೊಂದಿದ್ದು, ರಾಸಾಯನ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.

ವಯೋಮಿತಿ:

ಜುಲೈ 20,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಡ 26 ವರ್ಷದ ಇತರೆ ವರ್ಗದ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ಹಿಂದುಳಿದ ವರ್ಗದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ದೇಹದಾರ್ಢ್ಯತೆ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್ ಸಿ ಅಧಿಕೃತ ಶಾಖೆಗಳಲ್ಲಿ ಬ್ಯಾಂಕಿನ ಕಛೇರಿ ವೇಳೆಯಲ್ಲಿ ಚಲನ್ ನೀಡಿ ಜುಲೈ 22,2020ರೊಳಗೆ ಹಣ ಪಾವತಿಸಬೇಕು. ಬ್ಯಾಂಕ್ ಶುಲ್ಕ 10/-ರೂ ಅನ್ನು ಪ್ರತ್ಯೇಕವಾಗಿ ಪಾವತಿಸಬೇಕು. ಡಿ.ಡಿ. ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://fso.ksfesonline.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 20,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state fire and emergency services recruitment 2020 notification has been released for the recruitment of 26 fire station officer posts. Interested candidates can apply through online before July 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+