ಪೊಲೀಸ್ ಇಲಾಖೆಯಲ್ಲಿ 38 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 28 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅವಶ್ಯವಿರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 28 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

38 ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಆರ್‍ಎಸ್‍ಐ) (ಸಿಎಆರ್/ಡಿಎಆರ್) (ಪುರುಷ) ಖಾಲಿ ಹುದ್ದೆಗಳ ವಿವರ:
ಎ) ಸಶಸ್ತ್ರ ಮೀಸಲು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಪುರುಷ) - 33
ಬಿ) ಸಶಸ್ತ್ರ ಮೀಸಲು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಸೇವೆಯಲ್ಲಿರುವವರಿಗೆ - 04
ಒಟ್ಟು = 37

ಹೈದರಾಬಾದ್-ಕರ್ನಾಟಕ ಮೀಸಲಾತಿಗೊಳಪಡುವ ಬೆಂಗಳೂರು ನಗರದಲ್ಲಿನ ಸಶಸ್ತ್ರ ಮೀಸಲು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಪುರುಷ) (ಸ್ಥಳೀಯ):
ಸಶಸ್ತ್ರ ಮೀಸಲು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಪುರುಷ) 01
ಒಟ್ಟು = 01

ವೇತನ ಶ್ರೇಣಿ: ರೂ.20000-36300/-

ವಿದ್ಯಾರ್ಹತೆ

ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 28.08.2017ಕ್ಕೆ ಹೊಂದಿರಬೇಕು.

(ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ:28.08.2017 ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು ಒಬಿಸಿ/ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು
ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ

ಅರ್ಜಿ ಶುಲ್ಕ

ಸಾಮಾನ್ಯ ಮತ್ತ ಒಬಿಸಿ ಅಭ್ಯರ್ಥಿಗಳಿಗೆ ರೂ.250/- ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/- ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.

ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಹಿಷ್ಣುತೆ ಮತ್ತು ದೇಹಧಾಢ್ರ್ಯತೆ ಪರೀಕ್ಷೆಯಲ್ಲಿ ಆರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿಯೇ ಲಿಖಿತ ಪರೀಕ್ಷೆ ನಡೆಸಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10.08.2017 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.08.2017, ಸಂಜೆ 06.00 ಗಂಟೆಗೆ
  • ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 29.08.2017.

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
KARNATAKA STATE POLICE INVITED ONLINE APPLICATION FOR THE POST OF ARMED RESERVE SUB-INSPECTOR OF POLICE (CAR/DAR)(MEN)
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X