ಕೆಎಸ್‍ಐಎಸ್‍ಎಫ್ 395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ

ಒಟ್ಟು 395 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ದಳ (ಕೆಎಸ್‍ಐಎಸ್‍ಎಫ್) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಎಸ್ಸಿ: ಗ್ರೂಪ್ 'ಸಿ' 1604 ಹುದ್ದೆಗಳ ನೇಮಕಾತಿಕೆಪಿಎಸ್ಸಿ: ಗ್ರೂಪ್ 'ಸಿ' 1604 ಹುದ್ದೆಗಳ ನೇಮಕಾತಿ

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.

ಕೆಪಿಎಸ್ಸಿ: ಹೆಚ್ಚುವರಿ 454 ಎಫ್ ಡಿ ಎ, 300 ಎಸ್ ಡಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಕೆಪಿಎಸ್ಸಿ: ಹೆಚ್ಚುವರಿ 454 ಎಫ್ ಡಿ ಎ, 300 ಎಸ್ ಡಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

  • ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‍ಐಎಸ್‍ಎಫ್) (ಪುರುಷ) - 356
  • ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‍ಐಎಸ್‍ಎಫ್) (ಮಹಿಳಾ) - 39

ಒಟ್ಟು = 395

ವಿದ್ಯಾರ್ಹತೆ

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 18.12.2017ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 18.12.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವೇತನ ಶ್ರೇಣಿ: ರೂ.11600-21000/-

ವಯೋಮಿತಿ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 18.12.2017ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
  • ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
  • ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-

ಪ್ರಮುಖ ದಿನಾಂಕಗಳ ಮಾಹಿತಿ

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.11.2017 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18.12.2017 ಸಂಜೆ 06.00 ಗಂಟೆಗೆ
  • ಶುಲ್ಕವನ್ನು ಅಧಿಕೃತ ಬ್ಯಾಂಕ್ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 20.12.2017.

ಸಹಾಯವಾಣಿ

ಅಭ್ಯರ್ಥಿಗಳು ಪಿಸಿ (ಕೆಎಸ್‍ಐಎಸ್‍ಎಫ್)-2017 ನೇಮಕಾತಿ ಸಹಾಯವಾಣಿ ಸಂಖ್ಯೆ. 080-22943346 ನ್ನು ಸಂಪರ್ಕಿಸಿ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಠಪಡಿಸಿಕೊಳ್ಳಬಹುದು. (ದಿನಾಂಕ:27.11.2017ರಿಂದ ಪ್ರತಿದಿನ ಬೆಳಿಗ್ಗೆ 10-00 ರಿಂದ ಸಾಯಂಕಾಲ 6-00 ಗಂಟೆಯವರೆಗು)

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KARNATAKA STATE POLICE INVITES ONLINE APPLICATION FOR THE POST OF POLICE CONSTABLE (MEN & WOMEN)(KSISF)– 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X