ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ-2017

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಹುದ್ದೆಗಳ ವಿವರ

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಸ್ಥಳೀಯ(ಪುರುಷ) (ಸಿಎಆರ್ / ಡಿಎಆರ್) 232
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಸ್ಥಳೀಯ(ಪುರುಷ) (ಹೈದ್ರಬಾದ್-ಕರ್ನಾಟಕ) (ಸಿಎಆರ್ / ಡಿಎಆರ್) (ಬೆಂಗಳೂರು ನಗರ) 109
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪರ ಸ್ಥಳೀಯ(ಪುರುಷ)(ಸಿಎಆರ್ / ಡಿಎಆರ್)109
ಒಟ್ಟು 450

ಪೊಲೀಸ್ ಇಲಾಖೆ ನೇಮಕಾತಿ

ವಿದ್ಯಾರ್ಹತೆ

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) ಹುದ್ದೆಗಳ ಆಯ್ಕೆಯ ಸಲುವಾಗಿ ಕಂಡಿಕೆ 1ರಲ್ಲಿ ನಮೂದಿಸಿರುವ ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮ 2009ರ ಪ್ರಕಾರ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 30.08.2017 ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ:30.08.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವಯೋಮಿತಿ

30/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 25, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 18ರಿಂದ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಖಾಯಂಪೂರ್ವ ಅವಧಿ

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂಪೂರ್ವ ಅವಧಿಯಲ್ಲಿರುತ್ತಾರೆ.

ವೇತನ ಶ್ರೇಣಿ: ರೂ.11600-21000

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/-
ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/-

ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು. ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ತಪಾಸಣೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :16.08.2017, ಬೆಳಿಗ್ಗೆ 10.00 ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.08.2017, ಸಂಜೆ 06.00 ಗಂಟೆಯವರೆಗೆ
ಅಧಿಕೃತ ಬ್ಯಾಂಕ್ ಶಾಖೆಗಳ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:01.09.2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KARNATAKA STATE POLICE INVITED ONLINE APPLICATION FOR THE POST OF ARMED POLICE CONSTABLE
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+