ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2019: 42 ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ 42 ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ನೇರ ನೇಮಕಾತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

 ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೋಧಕ ಮತ್ತು ಸಹಾಯಕ ಬೋಧಕ
Organisation ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
Educational Qualification ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಬೆಂಗಳೂರು, ಕರ್ನಾಟಕ
Salary Scale ಬೋಧಕ- 37,900/- ರಿಂದ 70,850/- ರೂ,ಸಹಾಯಕ ಬೋಧಕ-23,500/- ರಿಂದ 47,650/-ರೂ
Application Start Date January 28, 2019
Application End Date February 15, 2019

ವಿದ್ಯಾರ್ಹತೆ:

ಬೋಧಕ :ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂದ, ಅಂದರೆ 15.2.2019 ಕ್ಕೆ ಹೊಂದಿರಬೇಕು.
ಸಹಾಯಕ ಬೋಧಕ:ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕ ಅಂದರೆ 15.2.2019 ಕ್ಕೆ ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಬೋಧಕ 26
ಸಹಾಯಕ ಬೋಧಕ 16
ಒಟ್ಟು 42

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ15,2019ಕ್ಕೆ ಅಭ್ಯರ್ಥಿಯು ಕನಿಷ್ಟ 21 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯಸ್ಸನ್ನು ಮೀರಿರಬಾರದು.
1 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
2 ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು

ವೇತನದ ವಿವರ:

ಬೋಧಕ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 37,900/- ರಿಂದ 70,850/- ರೂ ವೇತನವನ್ನು ನೀಡಲಾಗುವುದು.
ಸಹಾಯಕ ಬೋಧಕ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,500/- ರಿಂದ 47,650/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಾಧಿಕಾರವು ಖಾಲಿ ಹುದ್ದೆಗಳ ಸಂಖ್ಯೆ ಹಾಗೂ ಕಾನೂನು ಮತ್ತು ನಿಯಮಗಳಿಗೆ ಅನುಸಾರವಾಗಿ ಒದಗಿಸಿದ ಮೀಸಲಾತಿಗನುಗುಣವಾಗಿ ಪ್ರತ್ಯೇಕವಾಗಿ ಬೋಧಕ ಹಾಗೂ ಸಹಾಯಕ ಬೋಧಕ ವೃಂದದ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗುವುದು.


ಅರ್ಜಿ ಶುಲ್ಕ:

ಸಾಮಾನ್ಯ ವರ್ಗ,ಪ್ರವರ್ಗ-2A,2B, 3A,3Bಗೆ ಸೇರಿದ ಅಭ್ಯರ್ಥಿಗಳಿಗೆ
ರೂ.250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ
ರೂ.100/-

ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ https://www.ksp.gov.in/ ನಲ್ಲಿನ current recruitment ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಆನ್ ಲೈನ್ ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.

ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್ ನಲ್ಲಿ ನಮೂದಾಗಿರುವ ಒಟ್ಟು ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ' ಯನ್ನು ಇಟ್ಟುಕೊಂಡಿರತಕ್ಕದ್ಉ ಅಥವಾ ಹೆಚ್.ಡಿ.ಎಫ್.ಸಿ ಯ IFSC Code: HDFC0003782 Account No: 50200036340849 ನ್ನು ಉಪಯೋಗಿಸಿಕೊಂಡು ಆನ್ ಲೈನ್ ಮೂಲಕ ಶುಲ್ಕವನ್ನು ಪಾವತಿಸಬಹುದು. ಅರ್ಜಿ ಶುಲ್ಕವನ್ನು ಫೆಬ್ರವರಿ 18,2019 ರೊಳಗೆ ಪಾವತಿಸಬೇಕು.

ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್ ಸೈಟ್ https://www.ksp.gov.in/ or https://www.karnataka.gov.in/hgcd/Pages/home.aspx ನಲ್ಲಿ My Applicaion ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ. ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka statte police invites applications for the recruitment of 42 instructor and Asst Instructor vacancies..Interested candidates can apply through online before 15th february 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X