ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ 5 ಚಾಲಕ ಹುದ್ದೆಗಳ ನೇರ ನೇಮಕಾತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 15.2019 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

| CRITERIA | DETAILS |
| Name Of The Posts | ಚಾಲಕ |
| Organisation | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ |
| Educational Qualification | ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಬೆಂಗಳೂರು, ಕರ್ನಾಟಕ |
| Salary Scale | ತಿಂಗಳಿಗೆ23,500/- ರಿಂದ 47,650/-ರೂ |
| Application Start Date | January 28, 2019 |
| Application End Date | February 15, 2019 |
ವಿದ್ಯಾರ್ಹತೆ:
ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕ, ಅಂದರೆ 15.2.2019 ಕ್ಕೆ ಹೊಂದಿರಬೇಕು.
ಮೋಟಾರು ವಾಹನಗಳ ಕಾಯ್ದೆ 1998 ರಲ್ಲಿ ತಿಳಿಸಿದಂತೆ, ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಗಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ15,2019ಕ್ಕೆ ಅಭ್ಯರ್ಥಿಯು ಕನಿಷ್ಟ 21 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯಸ್ಸನ್ನು ಮೀರಿರಬಾರದು.
1 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
2 ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,500/- ರಿಂದ 47,650/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಭಾರಿ ವಾಹನ ಚಾಲನಾ ಪರೀಕ್ಷೆಯಲ್ಲಿ ಮತ್ತು ಎಸ್.ಎಸ್.ಎಲ್.ಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಾಧಿಕಾರವು ಖಾಲಿ ಹುದ್ದೆಗಳ ಸಂಖ್ಯೆ ಮತ್ತು ಕಾನೂನು ಮತ್ತು ನಿಯಮಗಳಿಗೆ ಅನುಸಾರವಾಗಿ ಒದಗಿಸಿದ ಮೀಸಲಾತಿಗನುಗುಣವಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
ಅಲ್ಲದೆ, ಆಯ್ಕೆ ಪ್ರಾಧಿಕಾರವು ಮೇಲಿನ ಆಯ್ಕೆ ವಿಧಾನವನ್ನೇ ಅನುಸರಿಸಿ ನೇಮಕ ಮಾಡುವ ಹುದ್ದೆಗಳಿಗೆ ಅನುಗುಣವಾಗಿ ಹೆಚ್ಚುವರಿ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗುವುದು. ನಂತರದಲ್ಲಿ ನೇಮಕಾತಿ ಪ್ರಾಧಿಕಾರವು ಸೂಕ್ತವಾಗಿ ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿನ ಜೇಷ್ಠತೆಗನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ಹೊರಡಿಸಲಾಗುವುದು. ಮುಖ್ಯಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿದ ನಂತರದಲ್ಲಿ ಅಥವಾ ಯಾವುದಾದರೂ ಅಭ್ಯರ್ಥಿಯು ಅನರ್ಹವೆಂದು ಕಂಡುಬಂದಲ್ಲಿ ಹೆಚ್ಚುವರಿ ಪಟ್ಟಿಯಲ್ಲಿರುವವರನ್ನು ನೇಮಕ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ,ಪ್ರವರ್ಗ-2A,2B, 3A,3Bಗೆ ಸೇರಿದ ಅಭ್ಯರ್ಥಿಗಳಿಗೆ
ರೂ.250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ
ರೂ.100/-
ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್ ಸೈಟ್ https://www.ksp.gov.in/ ನಲ್ಲಿನ current recruitment ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಆನ್ ಲೈನ್ ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.
ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್ ನಲ್ಲಿ ನಮೂದಾಗಿರುವ ಒಟ್ಟು ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ' ಯನ್ನು ಇಟ್ಟುಕೊಂಡಿರತಕ್ಕದ್ಉ ಅಥವಾ ಹೆಚ್.ಡಿ.ಎಫ್.ಸಿ ಯ IFSC Code: HDFC0003782 Account No: 50200036340849 ನ್ನು ಉಪಯೋಗಿಸಿಕೊಂಡು ಆನ್ ಲೈನ್ ಮೂಲಕ ಶುಲ್ಕವನ್ನು ಪಾವತಿಸಬಹುದು. ಅರ್ಜಿ ಶುಲ್ಕವನ್ನು ಫೆಬ್ರವರಿ 18,2019 ರೊಳಗೆ ಪಾವತಿಸಬೇಕು.
ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್ ಸೈಟ್ https://www.ksp.gov.in/ or https://www.karnataka.gov.in/hgcd/Pages/home.aspxನಲ್ಲಿ My Applicaion ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ. ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











