ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 227 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ

184 ಸಿವಿಲ್ ಹಾಗೂ 84 ಗುಪ್ತಚರ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿ ದಿನಾಂಕ 2017, ಜೂನ್ 28 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜೂನ್ 29ಕೊನೆ ದಿನವಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 227 ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

184 ಸಿವಿಲ್ ಹಾಗೂ 84 ಗುಪ್ತಚರ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿ ದಿನಾಂಕ 2017, ಜೂನ್ 28 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜೂನ್ 29ಕೊನೆ ದಿನವಾಗಿದೆ.

ಹುದ್ದೆ: ಇನ್ಸ್ ಪೆಕ್ಟರ್
ಹುದ್ದೆ ಎಲ್ಲಿ?: ಕರ್ನಾಟಕ
ವೇತನ ಶ್ರೇಣಿ: ರೂ.20000 ರಿಂದ 36300/-

227 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ

ವಯೋಮಿತಿ

28/06/2017ಕ್ಕೆ ಅನ್ವಯವಾಗುವಂತೆ ಎಸ್ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 21ರಿಂದ 30 ಹಾಗೂ ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 21ರಿಂದ 28 ವಯಸ್ಸನ್ನು ನಿಗದಿ ಪಡಿಸಲಾಗಿದೆ

ವಿದ್ಯಾರ್ಹತೆ

ಪೊಲೀಸ್ ಸಬ್ ಇನ್​ ಸ್ಪೆಕ್ಟರ್ ಹುದ್ದೆಗೆ ಅರ್ಜಿ ಅಲ್ಲಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಪಡೆದಿರಬೇಕು.

ಆಯ್ಕೆ ವಿಧಾನ

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ, ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಶುಲ್ಕ ವಿವರ

  • ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
  • ನಿಗದಿತ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಸ್ಥಳೀಯ ಅಂಚೆ ಕಛೇರಿಯ ಅಧಿಕೃತ ಶಾಖೆಗಳಲ್ಲಿ ಕಛೇರಿಯ ವೇಳೆಯಲ್ಲಿ ಚಲನ್ ನೀಡಿ ಪಾವತಿಸಬೇಕು.
  • ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.inನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೆ ಆನ್-ಲೈನ್‍ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.

ಸೂಚನೆ

ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.inನಲ್ಲಿ
My Application ನ್ನು ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ. ಸದರಿ ಅರ್ಜಿ ಪ್ರತಿಯನ್ನು ಪ್ರಿಂಟ್ ಮಾಡಿಟ್ಟುಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.

www.ksp.gov.in

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09.06.2017 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.06.2017, ಸಂಜೆ 06.00 ಗಂಟೆಗೆ
  • ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 29.06.2017.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka State Police released new notification on their official website for the recruitment of 227 (two hundred and twenty seven) vacancies for Police Sub Inspector. Job seekers should apply from 09th June 2017 and before 28th June 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X