Karnataka Teacher Recruitment 2022 : ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿಗಳ) ವೃಂದದ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಅರ್ಜಿ ಸಲ್ಲಿಕೆಯ ಕುರಿತು ತಿಳಿಯಲು ಮುಂದೆ ಓದಿ.

Karnataka Teacher Recruitment 2022 ವಿದ್ಯಾರ್ಹತೆ :

Karnataka Teacher Recruitment 2022 ವಿದ್ಯಾರ್ಹತೆ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿಯಲ್ಲಿ ಒಟ್ಟಾರೆ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೋಮಾ ಅಥವಾ ಡಿಪ್ಲೋಮಾದಲ್ಲಿ ವಿಶೇಷ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

ಪದವಿಯಲ್ಲಿ ಒಟ್ಟಾರೆ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ ಶಿಕ್ಷಣ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

ಒಟ್ಟಾರೆಯಾಗಿ ಕನಿಷ್ಟ ಶೇ.50 ಅಂಕಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಹಾಗೂ 4 ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷಯದಲ್ಲಿ ಪದವಿ ಅಥವಾ 4 ವರ್ಷಗಳ ಶಿಕ್ಷಣ ವಿಷಯದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ನಿಗದಿತ ವಿದ್ಯಾರ್ಹತೆ ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಹರಾಗುವುದಿಲ್ಲ.

Karnataka Teacher Recruitment 2022 ವಯೋಮಿತಿ :

Karnataka Teacher Recruitment 2022 ವಯೋಮಿತಿ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಗರಿಷ್ಟ 42 ವರ್ಷ, 2ಎ,2ಬಿ, 3ಎ,3ಬಿ ಯ ಗರಿಷ್ಟ 45 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ್ ಪಂಗಡ/ಪ್ರವರ್ಗ-1/ವಿಕಲಚೇತನ ಗರಿಷ್ಟ 47 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

Karnataka Teacher Recruitment 2022 ಆಯ್ಕೆ ಪ್ರಕ್ರಿಯೆ :
 

Karnataka Teacher Recruitment 2022 ಆಯ್ಕೆ ಪ್ರಕ್ರಿಯೆ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ, ಪದವಿ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣ ಕೋರ್ಸ್ ನಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿ ವೈಯ್ಟೇಟ್ ಉಪಯೋಗಿಸಿ, ಶೇಕಡಾವಾರು ಲೆಕ್ಕ ಹಾಕಿ ಅದರ ಆಧಾರದ ಮೇಲೆ ಪ್ರತ್ಯೇಕವಾಗಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

Karnataka Teacher Recruitment 2022 ವೇತನ :

Karnataka Teacher Recruitment 2022 ವೇತನ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Karnataka Teacher Recruitment 2022 ಪರೀಕ್ಷೆಯ ದಿನಾಂಕ :

Karnataka Teacher Recruitment 2022 ಪರೀಕ್ಷೆಯ ದಿನಾಂಕ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲಾ ಹಂತದಲ್ಲಿ ರಾಜ್ಯಾದಂತ ಏಕಕಾಲಕ್ಕೆ ಮೇ 21,2022 ಮತ್ತು ಮೇ 22,2022ರಂದು ನಡೆಸಲಾಗುವುದು.

Karnataka Teacher Recruitment 2022 ಅರ್ಜಿ ಶುಲ್ಕ :

Karnataka Teacher Recruitment 2022 ಅರ್ಜಿ ಶುಲ್ಕ :

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪದವೀಧರ ಪ್ರಾಥಮಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ 625/-ರೂ, ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ 1250/-ರೂ ಮತ್ತು ಇತರೆ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ 1250/-ರೂ ಮತ್ತು ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ 2,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಬ್ಯಾಂಕ್ ಚಲನ್ ಮೂಲಕವೇ ಪಾವತಿಸತಕ್ಕದ್ದು. ಇನ್ಯಾವುದೇ ರೀತಿಯಲ್ಲಿ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ.

Karnataka Teacher Recruitment 2022 ಅರ್ಜಿ ಸಲ್ಲಿಕೆ :

Karnataka Teacher Recruitment 2022 ಅರ್ಜಿ ಸಲ್ಲಿಕೆ :

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.schooleducation.kar.nic.in/index.html ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ಇತರೆ ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka Teacher Recruitment 2022 : Karnataka govt released notification on 21st march, check Eligibility criteria, Qualification, Age Limit, Exam Date and How to Apply Online and other details in kannada. Interested candidates can apply before April 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X