ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 30,2019ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.

| CRITERIA | DETAILS |
| Name Of The Posts | ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ |
| Organisation | ಕರೂರ್ ವೈಶ್ಯ ಬ್ಯಾಂಕ್ |
| Educational Qualification | ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 18,000/-ರೂ |
| Application Start Date | March 11, 2019 |
| Application End Date | April 30, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಲ್ಲಿ ಶೇ೫೦%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಫೆಬ್ರವರಿ 28,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 30,2019ರೊಳಗೆ ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











