ಬೆಂಗಳೂರಿನಲ್ಲಿ ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳ-18

ಬೆಂಗಳೂರಿನಲ್ಲಿ ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳ ನಡೆಯುತ್ತಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಫೆ 2ರಂದು ಬೆಂಗಳೂರಿನ ಜಯನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.

ಫೆ.3 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳಫೆ.3 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಈ ಉದ್ಯೋಗ ಮೇಳಕ್ಕೆ ಉಚಿತ ಪ್ರವೇಶವಿದ್ದು, ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಉದ್ಯೋಗಾಕಾಂಕ್ಷಿಗಳು ಆನ್-ಲೈನ್ ಮೂಲಕ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ: 197 ಹುದ್ದೆಗಳಿಗೆ ಅವಕಾಶಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ: 197 ಹುದ್ದೆಗಳಿಗೆ ಅವಕಾಶ

ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಉದ್ಯೋಗ ಮೇಳದ ವಿವರ

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ.

ನೂರಕ್ಕೂ ಹೆಚ್ಚಿನ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಅವಕಾಶ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗ ಮೇಳ

ನೋಂದಾವಣಿ

ಆಕಾಂಕ್ಷಿಗಳು 7835844440 ಸಂಖ್ಯೆಗೆ ಮಿಸ್ ಕಾಲ್ ನೀಡುವ ಮೂಲಕ ಮತ್ತು ಆನ್-ಲೈನ್ ನಲ್ಲಿ ತಮ್ಮ ವಿವರ ದಾಖಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಕಂಪನಿಗಳು ಇ ಮೇಲ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಇ ಮೇಲ್ ವಿಳಾಸ: [email protected]

ಉದ್ಯೋಗ ಮೇಳ ನಡೆಯುವ ಸ್ಥಳ: ಚಂದ್ರಗುಪ್ತ ಮೌರ್ಯ ಆಟದ ಮೈದಾನ (ಶಾಲಿನಿ ಗ್ರೌಂಡ್ಸ್), 10ನೇ ಮುಖ್ಯ ರಸ್ತೆ, ಜಯನಗರ 5ನೇ ಬ್ಲಾಕ್, ಬೆಂಗಳೂರು

ಉದ್ಯೋಗ ಮೇಳ ನಡೆಯುವ ದಿನಾಂಕ:02-02-2018

ಉದ್ಯೋಗ ಮೇಳ ನಡೆಯುವ ಸಮಯ: ಬೆಳಿಗ್ಗೆ 9.30 ರಿಂದ ಸಂಜೆ 4.00 ಗಂಟೆಯವರೆಗೆ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮೇಳಕ್ಕೆ ಹೋಗುವ ಮುನ್ನ

ಮೊದಲನೆಯದಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಅಲ್ಲಿಗೆ ಹೋಗುವ ಮುನ್ನ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು.

ಸಂದರ್ಶನದ ವೇಳೆಗಿಂತ ಸ್ವಲ್ಪ ಮೊದಲೇ ಸ್ಥಳ ತಲುಪಿ.

ಸರಳವಾದ ಉಡುಗೆ ಧರಿಸಿ. ಮೇಕಪ್ ಸಹ ಸರಳವಾಗಿ ಗೌರವಯುತವಾಗಿದ್ದು, ಸ್ಮಾರ್ಟ್ ಲುಕ್ ಕೊಡುವಂತೆ ಇರಬೇಕು.

ನಿಮ್ಮ ಸಾಮರ್ಥ್ಯ, ಕೆಲಸದ ಬಗೆಗಿರುವ ಆಸಕ್ತಿ, ಶ್ರಮ, ದುಡಿಮೆ, ಪ್ರಾಮಾಣಿಕತನದ ಬಗ್ಗೆ ಹೇಳಿ. ನೆನಪಿರಲಿ, ಆತ್ಮಪ್ರಶಂಸೆ ಅತಿಯಾಗದಂತೆ ಗಮನ ವಹಿಸಿ.

ನಿಮಗಿರುವ ಪರಿಣತಿ, ವಿಶೇಷ ಅರಿವು, ಎಂಥ ಒತ್ತಡಕ್ಕೂ ಒಳಗಾಗದೇ ದುಡಿಯುವ ಮನೋಭಾವ, ಎಲ್ಲದರಲ್ಲೂ ನಿಮಗಿರುವ ಜ್ಞಾನದ ಬಗ್ಗೆ ತಿಳಿಸಿ ಅವರ ಗಮನ ಸೆಳೆಯಿರಿ.

ಅಗತ್ಯ ದಾಖಲೆಗಳನ್ನು ಕೊಂಡೊಯ್ಯಿರಿ

  • ರೆಸ್ಯುಮ್ ಮತ್ತು ಬಯೋಡೆಟಾ.
  • ಕನಿಷ್ಠ ಮೂರು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು.
  • ಭಾವ ಚಿತ್ರವಿರುವ ಗುರುತು ಚೀಟಿಗಳು ಹಾಗು ಅವುಗಳ ಝೆರಾಕ್ಸ್ ಪ್ರತಿಗಳು.
  • ಈ ಹಿಂದೆ ಎಲ್ಲಾದರು ಕೆಲಸ ಮಾಡಿದ್ದರೆ ಅದರ ಸೇವಾನುಭವದ ಪ್ರಮಾಣ ಪತ್ರ
For Quick Alerts
ALLOW NOTIFICATIONS  
For Daily Alerts

English summary
Mega job fair is being held in Jayanagar, Bangalore on February 2 under the Koushalya Karnataka scheme. This job fair has free access and no registration fee. aspirants can participate in the job fair by submitting their details throug online or by giving miss call to the mentioned number.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X