KEA Recruitment 2021 : 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಕಮ್ ನೋಂದಣಿ ಪ್ರಕ್ರಿಯೆಯು ಅಕ್ಟೋಬರ್ 07, 2021 ರಿಂದ ಪ್ರಾರಂಭವಾಗಿ ನವೆಂಬರ್ 06, 2021 ರಂದು ಕೊನೆಗೊಳ್ಳುತ್ತದೆ.

KEA ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

KEA ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಳಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎನ್ಇಟಿ ಅಥವಾ ಕೆಸೆಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

KEA ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

KEA ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಖಾಲಿ ಹುದ್ದೆಗಳ ವಿವರ ಇಂತಿವೆ.

KEA ನೇಮಕಾತಿ 2021 ವಯೋಮಿತಿ:

KEA ನೇಮಕಾತಿ 2021 ವಯೋಮಿತಿ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 06, 2021ರ ಅನ್ವಯ ಕನಿಷ್ಟ 22 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ (ಜನ್/ಯುಆರ್), 43 ವರ್ಷ (OBC-2A/2B/3A/3B) ಮತ್ತು 45 ವರ್ಷ (SC/ST ಮತ್ತು CAT-I) ವಯೋಮಿತಿಯೊಳಗಿರಬೇಕು ಎಂದು ಕೆಇಎ ಅಧಿಸೂಚನೆ 2021 ರಲ್ಲಿ ಸೂಚಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KEA ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

KEA ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KEA ನೇಮಕಾತಿ 2021 ವೇತನ :

KEA ನೇಮಕಾತಿ 2021 ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯುಜಿಸಿ ವೇತನ ಶ್ರೇಣಿ ಅನುಸಾರ ತಿಂಗಳಿಗೆ 57,700/- ರಿಂದ 1,82,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KEA ನೇಮಕಾತಿ 2021 ಅರ್ಜಿ ಶುಲ್ಕ :

KEA ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ ರೂ. 2,000/- (Gen/UR ಮತ್ತು OBC-2A/2B/3A/3B) ಮತ್ತು ರೂ. 1,000/- (SC/ST ಮತ್ತು CAT-I) ಅನ್ನು ಅರ್ಜಿ ಶುಲ್ಕವಾಗಿ ಇ-ಪೋಸ್ಟ್ ಆಫೀಸ್ ಮೋಡ್ ಮೂಲಕ ನವೆಂಬರ್ 10, 2021ರೊಳಗೆ ಪಾವತಿಸಬೇಕಿರುತ್ತದೆ ಎಂದು ಕೆಇಎ ಸಹಾಯಕ ಪ್ರಾಧ್ಯಾಪಕರ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

KEA ನೇಮಕಾತಿ 2021 ಪ್ರಮುಖ ದಿನಾಂಕಗಳು :

KEA ನೇಮಕಾತಿ 2021 ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಅಕ್ಟೋಬರ್ 7,2021ರ ಬೆಳಿಗ್ಗೆ 11:30 ರಿಂದ

ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ನವೆಂಬರ್ 6,2021ರ ರಾತ್ರಿ 11:59ರೊಳಗೆ

ಇ-ಪೋಸ್ಟ್ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : ನವೆಂಬರ್ 10,2021

ಸ್ಪರ್ಧಾತ್ಮಕ ಪರೀಕ್ಷೆಯನ್ನು 2021ರ ಡಿಸೆಂಬರ್ ಮಾಹೆಯ ಮೂರನೇ ಅಥವಾ ನಾಲ್ಕನೇ ವಾರದ ಅವಧಿಯಲ್ಲಿ ನಡೆಸಲು ಸಾಧ್ಯತೆ ಇರುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ದಿನಾಂಕವನ್ನು ನಂತರ ತಿಳಿಸಲಾಗುವುದು.

KEA ನೇಮಕಾತಿ 2021 ಅರ್ಜಿ ಸಲ್ಲಿಕೆ :

KEA ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 6,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
https://www.careerindia.com/downloads/2021/10/keaap.pdf

More News  

For Quick Alerts
ALLOW NOTIFICATIONS  
For Daily Alerts

English summary
KEA recruitment 2021 notification has been released for 1242 assistant professor posts. Interested candidates can apply through online before november 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+