ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 32 ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜೂನ್ 22,2022 ರಿಂದ ಜುಲೈ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KEA ನೇಮಕಾತಿ 2022 ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕರು - 16 ಹುದ್ದೆಗಳು
ಹಿರಿಯ ಸಹಾಯಕರು - 1 ಹುದ್ದೆ
ಕಿರಿಯ ಸಹಾಯಕರು - 9 ಹುದ್ದೆಗಳು
ಬೀಜ ಸಹಾಯಕರು - 6 ಹುದ್ದೆಗಳು
ಒಟ್ಟು 32 ಹುದ್ದೆಗಳು
KEA ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಬಿ.ಎಸ್ಸಿ ಪದವಿ, ಬಿ.ಕಾಂ/ಬಿಬಿಎಂ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KEA ನೇಮಕಾತಿ 2022 ವಯೋಮಿತಿ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KEA ನೇಮಕಾತಿ 2022 ವೇತನ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 83,900/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
KEA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KEA ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು 750/-ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಜುಲೈ 25,2022ರೊಳಗೆ ಪಾವತಿಸಬೇಕಿರುತ್ತದೆ. ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
KEA ನೇಮಕಾತಿ 2022 ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭ ದಿನಾಂಕ : ಜೂನ್ 22,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20,2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : ಜುಲೈ 25,2022
KEA ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜ್ಯ ಬೀಜ ನಿಗಮ ನಿಯಮಿತ ನೇಮಕಾತಿಯ ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 22,2022 ರಿಂದ ಜುಲೈ 20,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











