ಕೇರಳ ರಾಜ್ಯ ಇಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಲ್ಟ್ರಾನ್) 102 ಮ್ಯಾನೇಜರ್, ಇಂಜಿನಿಯರ್, ಅಧಿಕಾರಿ ಮತ್ತು ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ನವೆಂಬರ್ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂಬಿಎ, ಎಂಎಸ್ಡಬ್ಲ್ಯೂ, ಸಿಎ ಇಂಟರ್/ಸಿಎಂಎ ಇಂಟರ್ ಮತ್ತು ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಸೀನಿಯರ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ. ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 40 ವರ್ಷ, ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 36 ವರ್ಷ, ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 40 ವರ್ಷ, ಇಂಜಿನಿಯರ್/ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 36 ವರ್ಷ ಮತ್ತು ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 54,910/-ರೂ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,500/- ರಿಂದ 44,860/-ರೂ, ಸೀನಿಯರ್ ಇಂಜಿನಿಯರ್ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರಿಂದ 42,090/-ರೂ, ಇಂಜಿನಿಯರ್, ಅಧಿಕಾರಿ, ಇಂಜಿನಿಯರ್/ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,500/- ರಿಂದ 37,590/-ರೂ ಮತ್ತು ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,500/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿದ್ದಾರೆ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳುಕೇರಳ ರಾಜ್ಯ ಇಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಲ್ಟ್ರಾನ್) ನ ಅಧಿಕೃತ ವೆಬ್ಸೈಟ್ http://www.keltron.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 25,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.