ಕೇಂದ್ರೀಯ ವಿದ್ಯಾಲಯ ಸಂಘಥನ್ (ಕೆವಿಎಸ್) 27 ಪಿಜಿಟಿ, ಹೆಚ್ಎಂ ಮತ್ತು ಲೈಬ್ರರಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kvsangathan.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











