ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ನಿರ್ದೇಶಕರು, ಉಪನಿರ್ದೇಶಕರು ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ನಿರ್ದೇಶಕರು ಹುದ್ದೆಗಳಿಗೆ ಎಲೆಕ್ಟ್ರಿಕಲ್/ಪವರ್/ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು. ಉಪನಿರ್ದೇಶಕರು ಹುದ್ದೆಗಳಿಗೆ ಅರ್ಥಶಾಸ್ತ್ರದಲ್ಲಿ ಯಾವುದಾದರೂ ಅಂಗೀಕೃತ ವಿಶ್ವವಿದ್ಯಾನಿಲಯ ರಿಂದ ಪದವೀಧರರಾಗಿರಬೇಕು ಮತ್ತು ಸಹಾಯಕ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ನಿರ್ದೇಶಕರು, ಉಪನಿರ್ದೇಶಕರು ಹುದ್ದೆಗಳಿಗೆ ಗರಿಷ್ಟ 65 ವರ್ಷ ಮತ್ತು ಸಹಾಯಕ ಹುದ್ದೆಗಳಿಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಕೆ:
ಅರ್ಜಿಗಳನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಚೇರಿಯಲ್ಲಿ ಅಥವಾ ಆಯೋಗದ ಅಧಿಕೃತ ವೆಬ್‌ಸೈಟ್ https://karunadu.karnataka.gov.in/kerc/Pages/home.aspx ನಿಂದ ಪಡೆಯಬಹುದು. ಭರ್ತಿಮಾಡಿದ ಅರ್ಜಿಗಳನ್ನು ಡಿಸೆಂಬರ್ 19,2020ರಂದು ಅಥವಾ ಮುಂಚಿತವಾಗಿ ಕಚೇರಿಗೆ ಕಳುಹಿಸಬೇಕಿರುತ್ತದೆ.
ಕಚೇರಿ ವಿಳಾಸ:
ಕಾರ್ಯದರ್ಶಿ,
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ,
ಬೆಂಗಳೂರು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.