Karnataka Forest Department 2020: 339 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಹಾಕಿ

ಕರ್ನಾಟಕ ಅರಣ್ಯ ಇಲಾಖೆ 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಇಲಾಖೆಯು 327 + 12 (ಬ್ಯಾಕ್‌ಲಾಗ್) ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

339 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅರಣ್ಯ ರಕ್ಷಕ
Organisation ಅರಣ್ಯ ಇಲಾಖೆ
Educational Qualification ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale ತಿಂಗಳಿಗೆ 21,400/- ರಿಂದ 42,000/-ರೂ
Application Start Date March 16, 2020
Application End Date May 15, 2020

ವಿದ್ಯಾರ್ಹತೆ:

ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಧಿಸೂಚನೆಯ ದಿನಾಂಕಕ್ಕೆ ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಕುರಿತು ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮೆರಿಟ್ ಹಾಗೂ ಪ್ರವರ್ಗವಾರು ಮೀಸಲಾತಿ ಆಧಾರದ ಮೇಲೆ ವೃತ್ತವಾರು ಪ್ರತ್ಯೇಕವಾಗಿ 1:20 ಪಟ್ಟಿಯನ್ನು ಸಿದ್ದಪಡಿಸಿ, ಅರ್ಹ ಅಭ್ಯರ್ಥಿಗಳಿಗೆ ಮಾತ್ರ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯಸಮರ್ಥತೆ ಪರೀಕ್ಷೆಗಳಿಗೆ ಪ್ರವೇಶ ಪತ್ರ ನೀಡಲಾಗುವುದು. ದೈಹಿಕ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಮಾತ್ರ ಲಿಖಿ ಪರೀಕ್ಷೆಗೆ ಪರಿಗಣಿಸಿ, ಪರೀಕ್ಷೆ ನಡೆಯುವ ಸ್ಥಳ ಮತ್ತು ವೇಳೆಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100/-ರೂ +ಸೇವಾ ಶುಲ್ಕ ರೂ. 20.00; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಕುಷ್ಠ ರೋಗದಿಂದ ಗುಣಮುಖಹೊಂದಿದ ಅಂಗವಿಕಲ ಅಭ್ಯರ್ಥಿ ಹಾಗೂ ಮಾಹಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25.00 + ಸೇವಾ ಶುಲ್ಕ ರೂ.20.00. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಮುದ್ರಿತ ಅಂಚೆ ಚಲನ್ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ತೋರಿಸಿ, ಈ ಮೇಲೆ ತಿಳಿಸಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸತಕ್ಕದ್ದು. ಅರ್ಜಿ ಶುಲ್ಕವನ್ನು ಜೂನ್ 17,2020ರ ಮಧ್ಯಾಹ್ನ 2:30ರೊಳಗೆ ಪಾವತಿಸಬೇಕಿರುತ್ತದೆ.

339 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಜೂನ್ 15,2020ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸೂಚನೆ: ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸದೇ ನೇರವಾಗಿ ಕೊರಿಯರ್, ನೊಂದಾಯಿತ ಅಂಚೆ, ಸಾಧಾರಣ ಅಂಚೆ, ಮುದ್ದಾಂ ಇತ್ಯಾದಿ ವಿಧಾನಗಳ ಮುಖಾಂತರ ಕಳುಹಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department recruitment 2020 notification has been released on official website for the recruitment of 339 forest guard posts. Interested candidates can apply through online before 15th June 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+