KFD Recruitment 2022 : 10 ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ... ನ.19ರೊಳಗೆ ಅರ್ಜಿ ಹಾಕಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 10 ವಲಯ ಅರಣ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 40,900/-ರೂ ವೇತನ

KFD ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KFD ನೇಮಕಾತಿ 2022 ವಯೋಮಿತಿ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KFD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KFD ನೇಮಕಾತಿ 2022 ವೇತನ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KFD ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-೧ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನವೆಂಬರ್ 23,2022ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

KFD ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://kfdrecruitment.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KFD recruitment 2022 notification has been released for 10 range forest officer posts. Interested candidates can apply through online before November 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+