ಕರ್ನಾಟಕ ಅರಣ್ಯ ಇಲಾಖೆಯಲ್ಲಿ 43 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನೇಮಕಾತಿ 85ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.ಈ ಪೈಕಿ ಮೊದಲನೇ ಹಂತದಲ್ಲಿ 42+1ಪರಿಶಿಷ್ಠ ಸಂಗಡದ ಬ್ಯಾಕ್ ಲಾಗ್ ಹುದ್ದೆ ಸೇರಿ ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅರಣ್ಯ ವೀಕ್ಷಕ
Organisation ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ
Educational Qualification ಎಸ್.ಎಸ್.ಎಲ್.ಸಿ/10ನೇ ತರಗತಿ ಅಥವಾ ಸಮನಾದ ಅರ್ಹತೆ
Job Location ಕರ್ನಾಟಕ
Salary Scale 18,600/- ರಿಂದ 32,600/-ರೂ ವೇತನ
Industry ಅರಣ್ಯ ಇಲಾಖೆ
Application Start Date February 4, 2019
Application End Date March 6, 2019

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಗರಿಷ್ಠ ವಯೋಮಿತಿ:

ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ33 ವರ್ಷಗಳು
ಪ್ರವರ್ಗ-2A2B/3A/3B ಅಭ್ಯರ್ಥಿಗಳಿಗೆ32 ವರ್ಷಗಳು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ30 ವರ್ಷಗಳು

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪರಿಶೀಲಿಸಿಕೊಳ್ಳಬಹುದು.

ಹುದ್ದೆಗಳ ಮೀಸಲಾತಿ ವರ್ಗೀಕರಣ:

ಪ್ರವರ್ಗಇತರೆಮಾಜಿ ಸೈನಿಕಕುಷ್ಠರೋಗದಿಂದ ಗುಣಮುಖ ಹೊಂದಿದ ಅಭ್ಯರ್ಥಿಯೋಜನೆಗಳಿಂದ ನಿರಾಶ್ರಿತಗೊಂಡ ಕುಟುಂಬದ ಅಭ್ಯರ್ಥಿಗ್ರಾಮೀಣ ಅಭ್ಯರ್ಥಿಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಒಟ್ಟು
ಸಾಮಾನ್ಯ ಅರ್ಹತೆ11 2115121
ಪರಿಶಿಷ್ಠ ಜಾತಿ3 1 2 6
ಪರಿಶಿಷ್ಠ ಪಂಗಡ1 1
ಪ್ರವರ್ಗ-12 2
ಪ್ರವರ್ಗ-2A3 1 2 6
ಪ್ರವರ್ಗ-2B2 2
ಪ್ರವರ್ಗ-3A2 2
ಪ್ರವರ್ಗ-3B2 2
ಒಟ್ಟು262319142

ಅರಣ್ಯ ವೀಕ್ಷಕ 1(ಬ್ಯಾಕ್ ಲಾಗ್) ಹುದ್ದೆ:

ಪ್ರವರ್ಗಹುದ್ದೆ
ಪರಿಶಿಷ್ಠ ಪಂಗಡ (ಇತರೆ)1
ಒಟ್ಟು1

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,600/- ರಿಂದ 32,600/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, 2A, 2B, 3A,3B ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 230/- ರೂ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 130/- ರೂ ಅನ್ನು ಪಾವತಿಸಬೇಕು. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 7.3.2019.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್ ಲೈನ್ ಮುಖಾಂತರ ಅಭ್ಯರ್ಥಿಗಳು ಸಲ್ಲಿಸತಕ್ಕದ್ದು. ಆನ್ ಲೈನ್ ಅರ್ಜಿ, ಅಧಿಸೂಚನೆ ಇವುಗಳನ್ನು ಇಲಾಖಾ ವೆಬ್ ಸೈಟ್: www.kfdcl.kar.nic.in ನಲ್ಲಿ ಪ್ರಕಟಪಡಿಸಲಾಗುವುದು. ಇದನ್ನು ಹೊರತುಪಡಿಸಿ ಯಾವುದೇ ವಿಧದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಆನ್ ಲೈನ್ ಅರ್ಜಿಯನ್ನು ತುಂಬಲು ಸಹಾಯಕವಾಗುವ ಸೂಚನೆಗಳಲ್ಲನ್ನು ನಿಗಮದ ವೆಬ್ ಸೈಟ್ ನಲ್ಲಿ ನೀಡಲಾಗುವುದು. ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಾರದು. ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ತಾವು ಆನ್ ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಒಂದು ಮುದ್ರಿತ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ, ನಿಗದಿತ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸತಕ್ಕದ್ದು. ಆನ್ ಲೈನ್ ಅರ್ಜಿಯ ಪ್ರತಿಯನ್ನು ಅಂಚೆ ಮುಖಾಂತರ, ಮುದ್ದಾಂ ಆಗಿ ಅಥವಾ ಇನ್ನಿತರ ವಿಧದಲ್ಲಿ ಇಲಾಖೆಗೆ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ನೇಮಕಾತಿ ಪರೀಕ್ಷೆಗಳು ಒಂದೇ ದಿನಾಂಕದಂದು ಒಂದೇ ವೇಳೆಯಲ್ಲಿ ನಡೆಸಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಮತ್ತು ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ಮತ್ತು ದೈಹಿಕ ತಾಳ್ವಿಕೆ ಮತ್ತು ಲಿಖಿತ ಪರೀಕ್ಷೆಗಳು ನಡೆಯುವ ಸ್ಥಳ ಮತ್ತು ವೇಳೆಯನ್ನು ನಿಗಮದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ನಿಗಮದ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡುವುದು. ಇದನ್ನು ಹೊರತುಪಡಿಸಿ ಅಂಚೆ ಮುಖಾಂತರ ಪ್ರವೇಶ ಪತ್ರವನ್ನು ಕಳುಹಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Forest Department Corporation invited applications for 43 forest watchers posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+