Khadi karnataka recruitment 2021 : 29 ಎಫ್‌ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ 29 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಉದ್ಯೋಗಾವಕಾಶ

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 25,2021 ರಿಂದ ನವೆಂಬರ್ 23,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಹುದ್ದೆಗಳಿಗೆ ಸ್ನಾತಕ ಪದವಿ,
ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಪದವಿ, ತಾಂತ್ರಿಕ ಮೇಲ್ವಿಚಾರಕರು ಹುದ್ದೆಗಳಿಗೆ ಬಿ.ಎಸ್ಸಿ/ಡಿಪ್ಲೋಮಾ ಮತ್ತು
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,300/- ರಿಂದ 88,300/-ರೂ, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ, ತಾಂತ್ರಿಕ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ವಿವಿಧ ಹುದ್ದೆಗಳಿಗೆಎ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಅಕ್ಟೋಬರ್ 25,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 23,2021ರ ರಾತ್ರಿ 12:00
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 23,2021

ಅರ್ಜಿ ಶುಲ್ಕ:

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ/ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 800/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳು 400/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ/ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://khadi.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಅಕ್ಟೋಬರ್ 25,2021 ರಿಂದ ನವೆಂಬರ್ 23,2021ರ ರಾತ್ರಿ 12:00 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Khadi karnataka recruitment 2021 notification has been released for 29 FDA and various posts. Interested candidates can apply through online before November 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+