KVIC Recruitment 2019: 108 ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 108 ಕಾರ್ಯನಿರ್ವಾಹಕ ಮತ್ತು ಸಹಾಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

108 ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ...ಜ.19ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಕಾರ್ಯನಿರ್ವಾಹಕ ಮತ್ತು ಸಹಾಯಕ
Organisation ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
Educational Qualification ಪದವಿ,ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date December 20, 2019
Application End Date January 19, 2020

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ,ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 27 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕೃತ ವೆಬ್‌ಸೈಟ್‌ http://www.kvic.org.in/kvicres/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Khadi and village industries commission (KVIC) recruitment 2019 notification has been released on official website for the recruitment of 108 executive and assistant posts. Interested candidates can apply through online before 19th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+