ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) 2 ಸ್ಟೆಷಲಿಸ್ಟ್ ಮತ್ತು ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 10,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನದ ವಿವರ:
ಸ್ಟೆಷಲಿಸ್ಟ್ ಮತ್ತು ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಧಿಕೃತ ವೆಬ್‌ಸೈಟ್: http://www.khpt.org/


Click it and Unblock the Notifications











