KIMS Kodagu Recruitment 2021: 184 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು 184 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕಿಮ್ಸ್ ನಲ್ಲಿ 184 ವಿವಿಧ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಎಂಬಿಬಿಎಸ್, ಎಂಡಿ, ಡಿಎಂ/ಡಿಎನ್‌ಬಿ, ಡಿಪ್ಲೋಮಾ/ಬಿ.ಇ, ಬಿ.ಎಸ್ಸಿ, ಬಿ.ಫಾರ್ಮಾ/ಡಿ.ಫಾರ್ಮಾ, ಡಿಎಂಎಲ್‌ಟಿ/ಬಿ.ಎಸ್ಸಿ ಎಂಎಲ್‌ಟಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 14,000/- ರಿಂದ 2,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಅಗತ್ಯ ಶೈಕ್ಷಣಿಕ ಹಾಗೂ ಅನುಭವದ ಮೂಲ ದಾಖಲಾತಿಗಳು ಮತ್ತು ಎರಡು ನಕಲು ಪ್ರತಿ, ಭಾವಚಿತ್ರಗಳೊಂದಿಗೆ ಮೇ 10 ರಿಂದ ಮೇ 15,2021ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ:
ಕೌನ್ಸಿಲ್ ಸಭಾಂಗಣ 'ಎ' ಬ್ಲಾಕ್ ಕೊಡಗು,
ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಮಡಿಕೇರಿ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KIMS kodagu recruitment 2021 notification has been released for 184 various posts. Interested candidates can attend walk interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X