ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ 35 ಶುಶ್ರೂಷಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 21 ರಿಂದ ಜುಲೈ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ವಿದ್ಯಾರ್ಹತೆಯನ್ನು ಡಿಪ್ಲೋಮಾ, ಬಿ.ಎಸ್ಸಿ ನಲ್ಲಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ಹುದ್ದೆಗಳಿಗೆ ಜುಲೈ 2,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇತರೆ ಅಭ್ಯರ್ಥಿಗಳು 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಮತ್ತು ಇತರೆ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ :
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ನೇಮಕಾತಿಯ ಶುಶ್ರೂಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kimskodagu.kar.nic.in/ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 21 ರಿಂದ ಜುಲೈ 2,2022ರೊಳಗೆ ಅರ್ಜಿಯನ್ನು ಹಾಕಬಹುದು.
ಕಚೇರಿ ವಿಳಾಸ:
Director & Dean, Kodagu Institute of Medical Sciences, Madikeri, Kodagu District, Karnataka.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.