
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ 15 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 26,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KIMS Koppal ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

KIMS Koppal ನೇಮಕಾತಿ 2021 ವಯೋಮಿತಿ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KIMS Koppal ನೇಮಕಾತಿ 2021 ವೇತನ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

KIMS Koppal ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡಿಸೆಂಬರ್ 27ರಂದು ನಡೆಯುವ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KIMS Koppal ನೇಮಕಾತಿ 2021 ಅರ್ಜಿ ಶುಲ್ಕ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಡಿಸೆಂಬರ್ 26,2021ರೊಳಗೆ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

KIMS Koppal ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kimskoppal.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ. ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 26,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಚೇರಿ ವಿಳಾಸ:
ನಿರ್ದೇಶಕರು,
ಕಿಮ್ಸ್,
ಕೊಪ್ಪಳ.
ಅಭ್ಯರ್ಥಿಗಳು ಕಿಮ್ಸ್ ಕೊಪ್ಪಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.