ಕಿಮ್ಸ್ ನೇಮಕಾತಿ 2020: 117 ಹುದ್ದೆಗಳ ನೇಮಕಾತಿ…ಫೆ.17ಕ್ಕೆ ನೇರ ಸಂದರ್ಶನ

ಅರ್ಹ ಅಭ್ಯರ್ಥಿಗಳು ಫೆಬ್ರವರಿ 17,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು 117 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 17,2020 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಿಮ್ಸ್‌ ನಲ್ಲಿ 117 ಹುದ್ದೆಗಳಿಗೆ ಫೆ.17ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಪ್ರೊಫೆಸರ್,ಅಸೋಸಿಯೇಟ್ ಪ್ರೊಫೆಸರ್,ಅಸಿಸ್ಟೆಂಟ್ ಪ್ರೊಫೆಸರ್,ಟ್ಯೂಟರ್, ಜ್ಯೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್
Organisation ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್ ಕಾರವಾರ)
Educational Qualification ಎಂಬಿಬಿಎಸ್,ಎಂ.ಡಿ,ಎಂ.ಎಸ್,ಎಂ.ಎಸ್ಸಿ,ಪಿ.ಹೆಚ್‌ಡಿ
Job Location ಕಾರವಾರ (ಕರ್ನಾಟಕ)
Salary Scale ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ -ತಿಂಗಳಿಗೆ 37,400/-ರಿಂದ 67,000/-ರೂ, ಅಸಿಸ್ಟೆಂಟ್ ಪ್ರೊಫೆಸರ್ -ತಿಂಗಳಿಗೆ 15,600/-ರಿಂದ 39,100/-ರೂ,ಸೀನಿಯರ್ ರೆಸಿಡೆಂಟ್ - ತಿಂಗಳಿಗೆ 45,000/-ರೂ,ಟ್ಯೂಟರ್ ಮತ್ತು ಜ್ಯೂನಿಯರ್ ರೆಸಿಡೆಂಟ್ - ತಿಂಗಳಿಗೆ 40,000/-ರೂ
Application Start Date February 7, 2020
Application End Date February 17, 2020

ಶೈಕ್ಷಣಿಕ ವಿದ್ಯಾರ್ಹತೆ:

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಹುದ್ದೆಗಳಿಗೆ ಎಂಬಿಬಿಎಸ್,ಎಂ.ಡಿ,ಎಂ.ಎಸ್,ಎಂ.ಎಸ್ಸಿ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ, ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 50, 45 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/-ರಿಂದ 67,000/-ರೂ, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 39,100/-ರೂ,ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ,ಟ್ಯೂಟರ್ ಮತ್ತು ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಫೆಬ್ರವರಿ 16,2020ರೊಳಗೆ ಪಾವತಿಸಬೇಕಿರುತ್ತದೆ.

ಸಂದರ್ಶನದ ವಿವರ:

ಕಾರವಾರದ ಕಿಮ್ಸ್‌ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.kimskarwar.kar.nic.in/k index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 17,2020ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಕಾರವಾರ,
ಕರ್ನಾಟಕ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
KIMS recruitment 2020 notification has been released on official website for the recruitment of 117 teaching posts. Interested candidates can attend walk-in interview on 17th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+