ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) 11 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ವಯೋಮಿತಿ:
ಡಿಸೆಂಬರ್ 31,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿಗೆ ಮಾರ್ಚ್ 1,2021ರೊಳಗೆ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











