KIOCL Recruitment 2021: 8 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನಲ್ಲಿ 8 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 25ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ, ಎಂಬಿಎ/ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮೇ 31,2021ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ/ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 30,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Joint General Manager (HR&A),
HR Department, KIOCL Department,
KIOCL limited,
Koramangala 2nd Block,
Sarjapura Road,
Bengaluru-560034

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KIOCL recruitment 2021 notification has been released for 8 executive trainee posts. Interested candidates can apply before july 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X