KIOCL Recruitment 2021: ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಐರನ್‌ ಓರ್‌ ಕಂಪೆನಿ ಆಫೀಸರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಫೆಬ್ರವರಿ 13,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಕೆಐಓಸಿಎಲ್ ನಲ್ಲಿ ಉದ್ಯೋಗಾವಕಾಶ..ಫೆ.13ರೊಳಗೆ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ಗ್ರಾಜುಯೇಶನ್, ಎಂಬಿಎ ಮತ್ತು ಎಂ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2020 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಆಫೀಸರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಫೀಸರ್ ಟ್ರೈನಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕುದುರೆಮುಖ ಐರನ್‌ ಓರ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021 ರಿಂದ ಫೆಬ್ರವರಿ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅದಕ್ಕೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಫೆಬ್ರವರಿ 21,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಜಾಯಿಂಟ್ ಜನರಲ್ ಮ್ಯಾನೇಜರ್,
ಹೆಚ್‌ಆರ್‌ ವಿಭಾಗ,
ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್,
ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರೋಡ್,
ಬೆಂಗಳೂರು-560 034.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KIOCL recruitment 2021 notification has been released for officer trainee posts. Interested candidates can apply through online before February 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+