KLE Recruitment 2020: ಬೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.4ರೊಳಗೆ ಅರ್ಜಿ ಹಾಕಿ

ಬೆಳಗಾವಿಯ ಕೆಎಲ್ಇ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಬೋಧನಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 4,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೆಎಲ್ಇ ನಲ್ಲಿ ಬೋಧನಾ ಹುದ್ದೆಗಳ ನೇಮಕಾತಿ..ನ.4ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಕೆಎಲ್ಇ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ಎಂ.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಕೆಎಲ್ಇ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kledeemeduniversity.edu.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 4,2020ರೊಳಗೆ ಅರ್ಜಿ ಸಲ್ಲಿಸಬಹುದು.

ನೇಮಕಾತಿಯ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KLE homeopathic medical college and hospital belagavi recruitment 2020 notification has been released for teaching posts. Interested candidates can apply through online before November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X