ಕರ್ನಾಟಕ ಹಾಲು ಒಕ್ಕೂಟ ನೇಮಕಾತಿ 2019 : ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 19,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಕರ್ನಾಟಕ ಹಾಲು ಒಕ್ಕೂಟದಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಹಾಯಕ ವ್ಯವಸ್ಥಾಪಕರು (ಎ.ಹೆಚ್‌ /ಎ.ಐ)
Organisation ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ
Educational Qualification ಬಿ.ವಿ.ಎಸ್ಸಿ ಅಥವಾ ಬಿ.ವಿ.ಎಸ್ಸಿ ಮತ್ತು ಎ.ಹೆಚ್ ಪದವಿ
Job Location ಮಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 52,650/- ರಿಂದ 97,100/-ರೂ
Application Start Date August 17, 2019
Application End Date September 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಭಾರತದಲ್ಲಿ ಕನೂನು ರೀತ್ಯಾ ಸ್ಥಾಪಿತವಾಗಿರುವ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ನಿಯತವಾಗಿ ಪಶು ವೈದ್ಯಕೀಯ ವಿಜ್ಞಾನದಲ್ಲಿ ಬಿ.ವಿ.ಎಸ್ಸಿ ಅಥವಾ ಬಿ.ವಿ.ಎಸ್ಸಿ ಮತ್ತು ಎ.ಹೆಚ್ ಪದವಿಧರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲರಿಗೆ ಮತ್ತು ವಿಧವೆಯರಿಗೆ ವಯೋಮಿತಿಯಲ್ಲಿ ಗರಿಷ್ಟ 10 ವರ್ಷಗಳ ಸಡಿಲಿಕೆ ಇರುತ್ತದೆ.

ವೇತನದ ವಿವರ:

ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಧಿಕೃತ ವೆಬ್‌ಸೈಟ್‌ http://www.dkmul.com/index.html ನಲ್ಲಿ ನೀಡಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿಸ್ಪಷ್ಟವಾಗಿ ಬರೆದು ಅಥವಾ ಬೆರಳಚ್ಚು / ಕಂಪ್ಯೂಟರ್ ಮುದ್ರಣ ಮಾಡಿಸಿ ಅಗತ್ಯವಿರುವ ಎಲ್ಲಾ ದಾಖಲೆಗಳ ಪ್ರತಿಗಳನ್ನು ಸ್ವತಃ ದೃಢೀಕರಿಸಿ ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಸೆಪ್ಟೆಂಬರ್ 19,2019ರಂದು ಸಂಜೆ 5:30 ರೊಳಗೆ ಅಥವಾ ಅದಕ್ಕೂ ಮುಂಚಿತವಾಗಿ ಕೊರಿಯರ್ ಅಥವಾ ಖುದ್ದಾಗಿ ಕಳುಹಿಸಬಹುದು. ಲಕೋಟೆಯ ಮೇಲೆ ಅರ್ಜಿ ಸಲ್ಲಿಸುವ ಹುದ್ದೆಯ ಹೆಸರನ್ನು ನಮೂದಿಸಬೇಕು.

ಕಚೇರಿಯ ವಿಳಾಸ:

ವ್ಯವಸ್ಥಾಪಕ ನಿರ್ದೇಶಕರು,
ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ,
ಮಂಗಳೂರು ಡೇರಿ ಆವರಣ, ಕುಲಶೇಖರ,
ಮಂಗಳೂರು-575005.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DKMUL Recruitment 2019-20:Apply for 03 Assistant Managers (A.H/A.I) vacancies. KMF Dakshina Kannada Co-operative Milk Producers Union Limited (DKMUL) invited applications from eligible and interested candidates to fill up Assistant Managers (A.H/A.I) Posts through DKMUL official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+