ಕೆಎಂಎಫ್ ಶಿಮುಲ್ ನೇಮಕಾತಿ 2020: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ, ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಒಂದು ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡಲು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಇಂದು ಸಂಜೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 

SHIMUL Recruitment 2020: ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಭಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ 29 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಈ ವಯೋಮಾನ ಉಳ್ಳ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ 18 ರಿಂದ 29 ವರ್ಷ ವಯೋಮಾನದವರಿಗೆ ಆದ್ಯತೆ ನೀಡಲಾಗುವುದು.

ವೇತನದ ವಿವರ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆಯಾ ಹುದ್ದೆ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಮೊತ್ತದ ಡಿ.ಡಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಶಿಮುಲ್ ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯನ್ನು ಲಗತ್ತಿಸುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ, ಮಾಚೇನಹಳ್ಳಿ, ನಿದಿಗೆ (ಅಂಚೆ), ಶಿವಮೊಗ್ಗ-577222 ಇವರಿಗೆ ಖುದ್ದಾಗಿ /ಅಂಚೆ/ಕೊರಿಯರ್ ಮೂಲಕ ಇಂದು ಸಂಜೆ 5 ಗಂಟೆ ಒಳಗಾಗಿ ತಲುಪಿಸುವ ಅವಕಾಶವಿರುತ್ತದೆ. ನಿಗದಿತ ದಿನಾಂಕ/ವೇಳೆ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KMF shimul recruitment 2020: Today is the last day to apply for assistant manager post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X